ಉಡುಪಿ: ಗಂಗೊಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಸೇವಾ ಸಂಘ (ರಿ.) ವತಿಯಿಂದ 47ನೇ ವರ್ಷ ಶಾರದೋತ್ಸವದ ವಿಸರ್ಜನಾ ಕಾರ್ಯಕ್ರಮ ಅಕ್ಟೋಬರ್ 16ರಂದು ನಡೆಯಲಿರುವ ಕಾರಣ, ಸಾರ್ವಜನಿಕ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಗಂಗೊಳ್ಳಿ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ, ಹೊಸಾಡು, ಹಾಗೂ ತ್ರಾಸಿ ಗ್ರಾಮದ ವ್ಯಾಪ್ತಿಯಲ್ಲಿರುವ ಎಲ್ಲಾ ರೀತಿಯ ಮದ್ಯ ಮಾರಾಟ ಸನ್ನದುಗಳನ್ನು ಹೊಂದಿರುವ ಬಾರ್ ಆಂಡ್ ರೆಸ್ಟೋರೆಂಟ್ ಮತ್ತು ವೈನ್ ಶಾಪ್ ಗಳ ಮದ್ಯ ಮಾರಾಟವನ್ನು ದಿನಾಂಕ 16-10-2021 ಬೆಳಿಗ್ಗೆ 6.00 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಹಾಗೂ ಮದ್ಯ ಮಾರಾಟವನ್ನು ನಿಷೇಧಿಸಿ ಉಡುಪಿ ಜಿಲ್ಲಾಧಿಕಾರಿ ಕೂರ್ವಾ ರಾವ್ ಎಂ. ಹೊರಡಿಸಿದ್ದಾರೆ. ಈ ದಿನದಂದು ಡ್ರೈ ಡೇ (ಒಣದಿನ) ಎಂದು ಘೋಷಿಸಲಾಗಿದೆ.
ಅ. 16- ಗಂಗೊಳ್ಳಿಯಲ್ಲಿ ಮದ್ಯ ಮಾರಾಟ ನಿಷೇಧ
ಅ. 16- ಗಂಗೊಳ್ಳಿಯಲ್ಲಿ ಮದ್ಯ ಮಾರಾಟ ನಿಷೇಧ
Date: