ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಮೈಸೂರಿನಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ನಾಡಹಬ್ಬ ಮೈಸೂರು ದಸರಾ ವಿಜಯದಶಮಿ ಮೆರವಣಿಗೆಯನ್ನು ಉದ್ಘಾಟಿಸಿ ವಿಶ್ವವಿಖ್ಯಾತ ಜಂಬೂಸವಾರಿಗೆ ಚಾಲನೆ ನೀಡಿದರು.
ಸಂಜೆ 4:32 ರ ಮೀನ ಲಗ್ನದಲ್ಲಿ ಮುಖ್ಯಮಂತ್ರಿಗಳು ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದರು. ಬಳಿಕ ಸಂಜೆ 5:25ಕ್ಕೆ ಚಿನ್ನದ ಅಂಬಾರಿಗೆ ಪುಷ್ಪಾರ್ಚನೆ ಸಲ್ಲಿಸುವುದರೊಂದಿಗೆ ಜಂಬೂ ಸವಾರಿ ಆರಂಭವಾಯಿತು. ಕೊರೊನಾ ಹಿನ್ನೆಲೆಯಲ್ಲಿ ಅರಮನೆ ಆವರಣದಲ್ಲಿ ಮಾತ್ರ ಜಂಬೂ ಸವಾರಿ ನಡೆಯಿತು. ಅಭಿಮನ್ಯು 750 ಕೆಜಿ ತೂಕದ ಚಿನ್ನದ ಅಂಬಾರಿಯಲ್ಲಿ ನಾಡದೇವತೆ ಚಾಮುಂಡೇಶ್ವರಿ ಉತ್ಸವ ಮೂರ್ತಿಯನ್ನು ಹೊತ್ತು ಸಾಗಿದ.
ಸಾರ್ವಜನಿಕರಿಗೆ ನಿರ್ಬಂಧ ಹೇರಲಾಗಿದ್ದರೂ ಅರಮನೆ ವೀಕ್ಷಣೆಗೆ ಸಾವಿರಾರು ಮಂದಿ ಆಗಮಿಸಿದ್ದರು. ಕೇವಲ 6 ಟ್ಯಾಬ್ಲೋಗಳಿಗೆ ಮಾತ್ರ ಅವಕಾಶ ನೀಡಲಾಗಿತ್ತು. ಹೀಗಾಗಿ ಜಂಬೂ ಸವಾರಿಯ ಸಂದರ್ಭದಲ್ಲಿ 6 ಸ್ತಬ್ಧಚಿತ್ರಗಳಿದ್ದವು.
ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್, ಸಚಿವ ಎಸ್.ಟಿ ಸೋಮಶೇಖರ್, ಜನಪ್ರತಿನಿಧಿಗಳು,
ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.