Saturday, September 21, 2024
Saturday, September 21, 2024

ಸೌತ್‌ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ಮಹಾಸಭೆ

ಸೌತ್‌ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ ಮಹಾಸಭೆ

Date:

ಉಡುಪಿ: ಒಬ್ಬ ವ್ಯಕ್ತಿಯ ವ್ಯಕ್ತಿತ್ವ ಸಮಾಜವನ್ನು ಕೇವಲ ಒಂದು ಚಿತ್ರದ ಮೂಲಕ ಬಿಂಬಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಫೋಟೋಗ್ರಾಫರ್ಸ್‌ ಸಮಾಜದ ದೃಷ್ಠಿಕೋನವನ್ನು ಅರ್ಥೈಸಿಕೊಂಡು ಧನಾತ್ಮಕ ಚಿತ್ರ ತೆಗೆಯಲು ಪ್ರಯತ್ನಿಸಬೇಕು ಎಂದು ಶ್ರೀ ಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ. ನಿ. ವಿಜಯ ಬಲ್ಲಾಳ್‌ ಹೇಳಿದರು.

ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ಸಹಯೋಗದಲ್ಲಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ವೇದಿಕೆಯಲ್ಲಿ ಆಯೋಜಿಸಿದ್ದ 31ನೇ ವಾರ್ಷಿಕ ಮಹಾಸಭೆಯನ್ನು ಉದ್ಭಾಟಸಿ ಅವರು ಮಾತನಾಡಿದರು. ಶಾಸಕ ಕೆ.ರಘುಪತಿ ಭಟ್‌ ಅವರು ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಿಸಿದರು. ಕ್ರೀಡಾಕೂಟ ಹಾಗು ಛಾಯಾಚಿತ್ರ, ವಿಡಿಯೋಗ್ರಫಿ ಸ್ಪರ್ಧೆಯಲ್ಲಿ ವಿಜೇತರಿಗೆ ಅಭಿನಂದಿಸಲಾಯಿತು

14 ವಲಯಗಳ ಪದಗ್ರಹಣ ನೆರವೇರಿಸಲಾಯಿತು. ನಿವೃತ್ತ ಯೋಧ ಕೃಷ್ಣ ಶೆಟ್ಟಿಬೆಟ್ಟು ಇವರಿಗೆ ಗೌರವ ಸಲ್ಲಿಸಲಾಯಿತು. ಛಾಯಾಚಿತ್ರ ಪರಿಕರಗಳ ಮಳಿಗೆ ಹಾಗೂ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಹಿರಿಯ ಫೋಟೋಗ್ರಾಫರ್ಸ್‌ ಗಳನ್ನು ಸಮ್ಮಾನಿಸಿದರು.

ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಪರಮೇಶ್‌ ಸುಬ್ಬಯ್ಯ, ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ವಿವಿಧೋದ್ದೇಶ ಸಹಕಾರ
ಸಂಘದ ಅಧ್ಯಕ್ಷ ಕೆ. ವಾಸುದೇವ ರಾವ್‌, ಸೌತ್‌ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್ ಉಪಾಧ್ಯಕ್ಷ ನಾಗರಾಜ ರಾಯಪ್ಪನಮಠ, ಪ್ರ. ಕಾರ್ಯದರ್ಶಿ ಹರೀಶ್‌ ಅಡ್ಯಾರ್‌, ಕೋಶಾಧಿಕಾರಿ ಆನಂದ ಎನ್‌., ಸಲಹಾ ಸಮಿತಿ ಸದಸ್ಯರು, ಸಂಘದ ಮಾಜಿ ಅಧ್ಯಕ್ಷರು, 14 ವಲಯಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಸೌತ್‌ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್‌ ಅಧ್ಯಕ್ಷ ಶ್ರೀಧರ್‌ ಶೆಟ್ಟಿಗಾರ್‌ ಸ್ವಾಗತಿಸಿ, ಸಂಘಟನಾ ಕಾರ್ಯದರ್ಶಿ ಸುಂದರ ಪೂಜಾರಿ ಕೊಳಗಿರಿ ವಂದಿಸಿದರು. ರಾಘವೇಂದ್ರ, ಬಬಿತಾ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವಕರ್ಮ ಯೋಜನೆಯ ಲಾಭ ಪಡೆದು ಕುಶಲಕರ್ಮಿಗಳು ಉದ್ಯಮಿಗಳಾಗಬಹುದು: ಪ್ರಧಾನಿ ನರೇಂದ್ರ ಮೋದಿ

ವಾರ್ಧಾ, ಸೆ.21: ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆಯ ಲಾಭ ಪಡೆಯುವ ಮೂಲಕ ಕುಶಲಕರ್ಮಿಗಳು...

ಭ್ರಷ್ಟಾಚಾರ ಪ್ರಕರಣ: ಲಾಲು ಪ್ರಸಾದ್ ಯಾದವ್ಗೆ ಸಿಬಿಐ ಬಿಸಿ

ನವದೆಹಲಿ, ಸೆ.21: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕ ಮತ್ತು ಮಾಜಿ...

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...
error: Content is protected !!