ಉಡುಪಿ: ಭಾರತ 100 ಕೋಟಿ ಡೋಸ್ ಕೋವಿಡ್ ಲಸಿಕೆ ಪೂರೈಸಿ ವಿಶ್ವ ದಾಖಲೆಗೈದಿರುವ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಹೇಮಂತ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಪ್ರವೀಣ ಕೆ., ನಗರ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಸರಸ್ವತಿ ಕೆ. ಶ್ರೀಯಾನ್ ರವರನ್ನು ಶಾಲು ಹೊದೆಸಿ ಸನ್ಮಾನಿಸಲಾಯಿತು.
ಶಾಸಕ ಕೆ.ರಘುಪತಿ ಭಟ್, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಪ್ರವೀಣ್ ಕುಮಾರ್ ಗುರ್ಮೆ ಉಪಸ್ಥಿತರಿದ್ದರು.