ಉಡುಪಿ: ಮಣಿಪಾಲದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್ಎಸ್ಎಲ್ಸಿ ಉತ್ತೀರ್ಣರಾದ ವಿದ್ಯಾರ್ಥಿಗಳಿಂದ 2 ವರ್ಷ ಅವಧಿಯ ಐ.ಟಿ.ಐ ವೃತ್ತಿಪರ ಕೋರ್ಸ್ ಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಸಾಲಿನಿಂದ ಟಾಟಾ ಸಂಸ್ಥೆಯ ಸಹಯೋಗದೊಂದಿಗೆ ಉನ್ನತೀಕರಣಗೊಂಡು, ರಾಜ್ಯ ವೃತ್ತಿ ಪರಿಷತ್ ಸಂಯೋಜನೆ ಪಡೆದ ಬ್ಯಾಟರಿ ಎಲೆಕ್ಟ್ರಿಕಲ್ ವೆಹಿಕಲ್ (ಆಟೋಮೊಬೈಲ್) ಹಾಗೂ ಅಡ್ವಾನ್ಸ್ಡ್ ಮ್ಯಾನುಫೆಕ್ಚರಿಂಗ್ ಹೊಸ ವೃತ್ತಿಪರ ಕೋರ್ಸ್ಗಳು ಪ್ರಾರಂಭವಾಗಿದ್ದು, ಆಸಕ್ತ ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಖುದ್ದಾಗಿ ಸಂಸ್ಥೆಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0820-2986145, 9740541554, 9738439619 ನ್ನು ಸಂಪರ್ಕಿಸುವಂತೆ ಸಂಸ್ಥೆಯ ಪ್ರಾಚಾರ್ಯರ ಪ್ರಕಟಣೆ ತಿಳಿಸಿದೆ.