Wednesday, October 9, 2024
Wednesday, October 9, 2024

ದೀಪ ಸಂಜೀವಿನಿ ಹಣತೆಗಳನ್ನು ಖರೀದಿಸಿ

ದೀಪ ಸಂಜೀವಿನಿ ಹಣತೆಗಳನ್ನು ಖರೀದಿಸಿ

Date:

ಉಡುಪಿ: ರಾಷ್ಟ್ರೀಯ ಜೀವನೋಪಾಯ ಅಭಿಯಾನ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆ ಮತ್ತು ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಉಡುಪಿ ಜಿಲ್ಲೆಯ ಸಂಜೀವಿನಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಮ್ಮ ಕೈಚಳಕದಿಂದ ವಿವಿಧ ವಿನ್ಯಾಸದ ಮಣ್ಣಿನ ಹಣತೆಗಳನ್ನು ತಯಾರಿಸಿದ್ದು, ‘ದೀಪ ಸಂಜೀವಿನಿ’ ಎಂಬ ಹೆಸರೊಂದಿಗೆ ಈ ಹಣತೆಗಳು ಮಾರುಕಟ್ಟೆ ಪ್ರವೇಶಿಸಿವೆ.

ಈ ಹಣತೆಗಳಿಗೆ ಯೋಗ್ಯ ಮಾರುಕಟ್ಟೆ ಒದಗಿಸಲು ಇಂದು ಮಣಿಪಾಲದ ಸಿಂಡಿಕೇಟ್ ಬ್ಯಾಂಕ್‌ನ ಗೋಲ್ಡನ್ ಜುಬಲಿ ಹಾಲ್ ನಲ್ಲಿ ನಡೆದ ಕ್ರೆಡಿಟ್ ಔಟ್ರೀಚ್ ಕಾರ್ಯಕ್ರಮದಲ್ಲಿ ದೀಪ ಸಂಜೀವಿನಿಯನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಉದ್ಘಾಟಿಸಿ, ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಉತ್ಪನ್ನಗಳಿಗೆ ಮಾರುಕಟ್ಟೆ ಅತ್ಯಾವಶ್ಯಕ.

ಜಿಲ್ಲಾ ಪಂಚಾಯತ್ ನಿಂದ ದೀಪಾವಳಿ ಹಬ್ಬದ ಸಮಯದಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರು ತಯಾರಿಸಿದ ಹಣತೆಗಳಿಗೆ ಮಾರುಕಟ್ಟೆ ನೆರವು ಒದಗಿಸುವುದು ಉತ್ತಮ ಕಾರ್ಯ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಹಣತೆಗಳನ್ನು ಖರೀದಿಸುವುದರ ಮೂಲಕ ಮಹಿಳಾ ಉದ್ಯಮಿಗಳನ್ನು ಪ್ರೋತ್ಸಾಹಿಸಬೇಕೆಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ವೃತ್ತ ಕಚೇರಿಯ ಮಹಾಪ್ರಬಂಧಕ ರಾಮ ನಾಯ್ಕ್, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿಯ ಪ್ರಾದೇಶಿಕ ಉಪಮಹಾಪ್ರಬಂಧಕ ಕೆ. ಕಾಳಿ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಪಿ.ಎಂ. ಪಿಂಜರ್, ಸಂಜೀವಿನಿ ಯೋಜನೆಯ ಜಿಲ್ಲಾ ವ್ಯವಸ್ಥಾಪಕ ಅವಿನಾಶ್ ಹಾಗೂ ನವ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇ-ಖಾತಾ ಸಂಬಂಧಿತ ಗೊಂದಲಗಳಿಗೆ ವಾರದೊಳಗೆ ಪರಿಹಾರ

ಬೆಂಗಳೂರು, ಅ.8: ಇ-ಖಾತಾಗೆ ಸಂಬಂಧಿಸಿದಂತೆ ಕೆಲವು ಗೊಂದಲಗಳಿದ್ದು, ಅವುಗಳನ್ನು ಒಂದು ವಾರದಲ್ಲಿ...

ದಸರಾ ಪ್ರಯುಕ್ತ 2000 ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು, ಅ.8: ದಸರಾ ಮಹೋತ್ಸವದ ಹಿನ್ನೆಲೆ ಕೆಎಸ್‌ಆರ್‌ಟಿಸಿ 2000ಕ್ಕೂ ಅಧಿಕ ವಿಶೇಷ...

ಅಂತಾರಾಷ್ಟ್ರೀಯ ವಿಪತ್ತು ಅಪಾಯ ಕಡಿತ (ಕಡಿಮೆಗೊಳಿಸುವ) ದಿನದ ಕುರಿತಾದ ಜಾಗೃತಿ ಕಾರ್ಯಕ್ರಮ ಉದ್ಘಾಟನೆ

ಮಣಿಪಾಲ, ಅ.8: ಮಣಿಪಾಲದ ಡಾ. ಟಿಎಂಎ ಪೈ ಸಭಾಂಗಣದಲ್ಲಿ ಅಂತರಾಷ್ಟ್ರೀಯ ವಿಪತ್ತು...

ವಿದ್ಯಾರ್ಥಿಗಳಿಗೆ ವೀರಗಾಥಾ ಕಾರ್ಯಕ್ರಮ

ಉಡುಪಿ, ಅ.8: ವಿದ್ಯಾರ್ಥಿಗಳ ಮನಸ್ಸಿನಲ್ಲಿ ದೇಶಪ್ರೇಮ ಮತ್ತು ದೇಶ ಭಕ್ತರ ಕುರಿತು...
error: Content is protected !!