ಉಡುಪಿ: ಉಡುಪಿ ಜಿಲ್ಲೆಯಲ್ಲಿ 2 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನಲ್ಲಿ ಬಹಳ ಸಮಯದ ನಂತರ ಶೂನ್ಯ ಪ್ರಕರಣ ದಾಖಲಾಗಿದೆ. ಕುಂದಾಪುರ, ಕಾರ್ಕಳ ತಾಲೂಕಿನಲ್ಲಿ ತಲಾ ಒಂದು ಕೊರೊನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ.
ಜಿಲ್ಲೆಯಲ್ಲಿ 7 ಮಂದಿ ಗುಣಮುಖರಾಗಿದ್ದು, ಇಲ್ಲಿಯವರೆಗೆ 76148 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 46 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಅಕ್ಟೋಬರ್ 26 ರಂದು 3845 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1209608 ಮಾದರಿಗಳನ್ನು ಪರೀಕ್ಷಿಸಲಾಗಿದೆ.