ಉಡುಪಿ: ಉಡುಪಿ ಜಿಲ್ಲೆಯಲ್ಲಿ 8 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-4, ಕುಂದಾಪುರ-1, ಕಾರ್ಕಳ-0, ಹೊರ ಜಿಲ್ಲೆಯ ಮೂವರು ಸೋಂಕಿಗೆ ಒಳಗಾಗಿದ್ದಾರೆ. 14 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76162 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 40 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಅಕ್ಟೋಬರ್ 27 ರಂದು 2931 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1212539 ಮಾದರಿಗಳನ್ನು ಪರೀಕ್ಷಿಸಲಾಗಿದೆ.