ಉಡುಪಿ: ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಅಕಾಲಿಕ ಮಳೆಯಿಂದಾಗಿ ರೈತರು ಕಂಗಾಲಾಗಿದ್ದು ಮಾತ್ರವಲ್ಲದೇ ಕಟಾವು ಯಂತ್ರದ ದುಪ್ಪಟ್ಟು ದರದಿಂದ ರೈತರು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಆದ್ದರಿಂದ ಮುಖ್ಯಮಂತ್ರಿಗಳು ಕೂಡಲೇ ಭತ್ತಕ್ಕೆ ಬೆಂಬಲ ಬೆಲೆಯನ್ನು ಘೋಷಿಸಬೇಕು ಎಂದು ಉಡುಪಿ ಜಿಲ್ಲಾ ಕಿಸಾನ್ ಕಾಂಗ್ರೆಸ್ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದೆ.
ವಿಳಂಬವಾಗಿ ಬೆಂಬಲ ಬೆಲೆ ಘೋಷಣೆ ಮಾಡಿದರೆ ಇದರ ಪ್ರಯೋಜನ ರೈತರಿಗೆ ಸಿಗದೇ ಅದು ಮಧ್ಯವರ್ತಿಗಳು ಹಾಗೂ ರೈಸ್ ಮಿಲ್ ಮಾಲಕರಿಗೆ ನೀಡಿದಂತಾಗುತ್ತದೆ. ಆದ್ದರಿಂದ ಮುಖ್ಯಮಂತ್ರಿಗಳು ಕೂಡಲೇ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ಕಿಸಾನ್ ಕಾಂಗ್ರೆಸ್ ಅಧ್ಯಕ್ಷರಾದ ಎಲ್ಲೂರು ಶಶಿಧರ್ ಶೆಟ್ಟಿ ಯವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.
ಖಾಸಗಿ ಕಟಾವು ಯಂತ್ರದ ದರವನ್ನು ಸರಕಾರಿ ಯಂತ್ರಗಳ ದರದಷ್ಟೇ ನಿಗದಿಪಡಿಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಬೇಕೆಂದು ಮುಖ್ಯಮಂತ್ರಿಯಲ್ಲಿ ಮನವಿ ಮಾಡಿದ್ದಾರೆ.