ಕಾರ್ಕಳ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯಾದ್ಯಂತ ಆಯೋಜಿಸಿದ ಮಾತಾಡ್ ಮಾತಾಡ್ ಕನ್ನಡ, ಕನ್ನಡ ರಾಜ್ಯೋತ್ಸವ ಅಭಿಯಾನದ ಪ್ರಯುಕ್ತ ಗೀತಾ ಗಾಯನ ಕಾರ್ಯಕ್ರಮವು ಗಣಿತನಗರದ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ ನಡೆಯಿತು.
ನಾಡಗೀತೆ, ಬಾರಿಸು ಕನ್ನಡ ಡಿಂಡಿಮವ, ಜೋಗದ ಸಿರಿ ಬೆಳಕಿನಲ್ಲಿ ಹಾಗೂ ಹುಟ್ಟಿದರೆ ಕನ್ನಡ ನಾಡಲಿ ಹುಟ್ಟಬೇಕು ಗೀತೆಗಳನ್ನು ಸಾಮೂಹಿಕವಾಗಿ ಹಾಡಲಾಯಿತು.
ಪ್ರಾಂಶುಪಾಲರಾದ ದಿನೇಶ ಎಂ.ಕೊಡವೂರು, ಉಪಪ್ರಾಂಶುಪಾಲೆ ಸಾಹಿತ್ಯ, ಪಿ.ಅರ್.ಓ. ಜ್ಯೋತಿ ಪದ್ಮನಾಭ ಬಂಡಿ ಉಪಸ್ಥಿತರಿದ್ದರು.
ಸಂಸ್ಥೆಯ ರಾಷ್ಟ್ರೀಯ ಸೇವಾ ಯೋಜನೆಯ ವಿದ್ಯಾರ್ಥಿಗಳು ಸಹಕರಿಸಿದರು. ವಿದ್ಯಾರ್ಥಿ ಚಿನ್ಮಯ್ ಕಾರ್ಯಕ್ರಮ ನಿರೂಪಿಸಿದರು.