ಉಡುಪಿ: ಉಡುಪಿ ಜಿಲ್ಲೆಯಲ್ಲಿ 2 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕಿನ ಇಬ್ಬರು ಸೋಂಕಿಗೆ ಒಳಗಾಗಿದ್ದಾರೆ.
6 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76189 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 39 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.
ಅಕ್ಟೋಬರ್ 30 ರಂದು 2199 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1220099 ಮಾದರಿಗಳನ್ನು ಪರೀಕ್ಷಿಸಲಾಗಿದೆ.