ನವದೆಹಲಿ: ಬೆಲೆ ಏರಿಕೆಯ ಸುಳಿಯಲ್ಲಿ ಸಿಲುಕಿದ ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ದೀಪಾವಳಿಯ ಕೊಡುಗೆ ನೀಡಿದೆ. ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಬೆಲೆಯನ್ನು ಇಳಿಸುವ ಮೂಲಕ ಬೆಳಕಿನ ಹಬ್ಬ ದೀಪಾವಳಿಗೆ ಬಿಗ್ ರಿಲೀಫ್ ನೀಡಿದೆ.
ರೈತರ ಮತ್ತು ಜನಸಾಮಾನ್ಯರ ಹಿತ ಕಾಯಲು ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ ಮಾಡಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.
ಪೆಟ್ರೋಲ್ ಮೇಲೆ 5, ಡೀಸೆಲ್ ಮೇಲೆ 10 ರೂಪಾಯಿ ಅಬಕಾರಿ ಸುಂಕವನ್ನು ಕಡಿತಗೊಳಿಸಿದೆ. ಇಂದು ಮಧ್ಯರಾತ್ರಿಯಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.