ಉಡುಪಿ: ಉಡುಪಿ ಜಿಲ್ಲೆಯಲ್ಲಿ 7 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-6, ಕುಂದಾಪುರ-0, ಕಾರ್ಕಳದಲ್ಲಿ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 3 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76225 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 37 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 4 ರಂದು 981 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1225929 ಮಾದರಿಗಳನ್ನು ಪರೀಕ್ಷಿಸಲಾಗಿದೆ.