ಉಡುಪಿ: ಉಡುಪಿ ಜಿಲ್ಲೆಯಲ್ಲಿ 5 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-3, ಕುಂದಾಪುರ-0, ಕಾರ್ಕಳ-1, ಹೊರ ಜಿಲ್ಲೆಯ ಓರ್ವರು ಸೋಂಕಿಗೆ ಒಳಗಾಗಿದ್ದಾರೆ. 4 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76239 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 43 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 476 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನವೆಂಬರ್ 7 ರಂದು 3056 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1231567 ಮಾದರಿಗಳನ್ನು ಪರೀಕ್ಷಿಸಲಾಗಿದೆ.