Saturday, November 23, 2024
Saturday, November 23, 2024

ಕೃಷಿ ಕಾಯ್ದೆ ವಾಪಾಸ್ ಪಡೆದ ಕೇಂದ್ರ ಸರಕಾರ

ಕೃಷಿ ಕಾಯ್ದೆ ವಾಪಾಸ್ ಪಡೆದ ಕೇಂದ್ರ ಸರಕಾರ

Date:

ನವದೆಹಲಿ: ರೈತರ ಸಮಸ್ಯೆ ಬಗೆಹರಿಸುವುದು ಸರ್ಕಾರದ ಪ್ರಮುಖ ಆದ್ಯತೆಯಾಗಿದ್ದು ಮೂರು ಕೃಷಿ ಕಾಯ್ದೆ ವಾಪಸ್ ಪಡೆಯಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಘೋಷಿಸಿದ್ದಾರೆ.

ಇಂದು ದೇಶವನ್ನುದ್ದೇಶಿಸಿ ಮಾತನಾಡಿದ ಅವರು ಈ ಮಹತ್ವದ ಘೋಷಣೆಯನ್ನು ಮಾಡಿದರು. ಮೂರು ಕಾಯ್ದೆಗಳು ರೈತರ ಒಳಿತಿಗಾಗಿಯೇ ಇತ್ತು. ಆದರೆ ಒಂದು ವರ್ಗದ ರೈತರನ್ನು ತಲುಪಲು ಸರಕಾರದ ಪ್ರಯತ್ನ ಫಲಿಸಲಿಲ್ಲ.

ರೈತರ ಶ್ರಮಕ್ಕೆ ತಕ್ಕ ಮೊತ್ತ ಸಿಗುವಂತೆ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ನಾವು ಗ್ರಾಮೀಣ ಮೂಲ ಸೌಕರ್ಯ ಮಾರುಕಟ್ಟೆಯನ್ನು ಬಲಪಡಿಸಿದ್ದೇವೆ.

ಎಂಎಸ್‌ಪಿ ಹೆಚ್ಚಿಸಿರುವುದು ಮಾತ್ರವಲ್ಲದೆ ದಾಖಲೆಯ ಸರ್ಕಾರಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಿದ್ದೇವೆ. ನಮ್ಮ ಸರ್ಕಾರದ ಸಂಗ್ರಹಣೆಯು ಕಳೆದ ಹಲವು ದಶಕಗಳ ದಾಖಲೆಯನ್ನು ಮುರಿದಿದೆ.

ರೈತರಿಗೆ ಸಮಂಜಸವಾದ ದರದಲ್ಲಿ ಬೀಜಗಳನ್ನು ಒದಗಿಸಲು ಮತ್ತು ನೀರಾವರಿ, 22 ಕೋಟಿ ಮಣ್ಣಿನ ಆರೋಗ್ಯ ಕಾರ್ಡ್‌ಗಳಂತಹ ಸೌಲಭ್ಯಗಳನ್ನು ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ.

ಇಂತಹ ಅಂಶಗಳು ಕೃಷಿ ಉತ್ಪಾದನೆಯನ್ನು ಹೆಚ್ಚಿಸಲು ಕಾರಣವಾಗಿವೆ. ಫಸಲ್ ಬಿಮಾ ಯೋಜನೆಯನ್ನು ಬಲಪಡಿಸಿದ್ದು, ಹೆಚ್ಚಿನ ರೈತರನ್ನು ಅದರ ಅಡಿಯಲ್ಲಿ ತಂದಿದ್ದೇವೆ

ದೇಶದಲ್ಲಿ 100ರಲ್ಲಿ 80 ಪ್ರತಿಶತ ರೈತರು ಸಣ್ಣ ಹಿಡುವಳಿ ರೈತರಾಗಿದ್ದು, 10 ಕೋಟಿಗಿಂತ ಹೆಚ್ಚು ಸಣ್ಣ ರೈತರಿದ್ದಾರೆ. ಅವರ ಸಮಸ್ಯೆಗಳನ್ನು ನಾನು ಅರಿತಿದ್ದೇನೆ.

ರೈತರು ಈಗ ಎಲ್ಲಿ ಬೇಕಾದರೂ ತಮ್ಮ ಬೆಳೆ ಮಾರಬಹುದು. ಕೃಷಿ ಬಜೆಟ್‌ ಮೊದಲಿಗಿಂತ 5 ಪಟ್ಟು ಹೆಚ್ಚಿಸಿದ್ದೇವೆ ಎಂದು ಪ್ರಧಾನಿ ಹೇಳಿದ್ದಾರೆ. ರೈತ ಹೋರಾಟಗಾರರು ಮೂರು ಕೃಷಿ ಕಾಯ್ದೆ ವಾಪಸ್ ನಿರ್ಧಾರವನ್ನು ಸ್ವಾಗತಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!