ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿರುವ ಅಕಾಲಿಕ ಮಳೆಯಿಂದಾಗಿ ಹಲವಾರು ಜಿಲ್ಲೆಗಳಲ್ಲಿ ಅಪಾರ ಬೆಳೆ ನಷ್ಟ ಉಂಟಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಿಕ್ಕಬಳ್ಳಾಪುರ ತಾಲೂಕಿನ ಆನೆಮೊಡಗು ಗ್ರಾಮಕ್ಕೆ ತೆರಳಿ ಭಾರಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳನ್ನು ವೀಕ್ಷಿಸಿದರು.
ಶಿಡ್ಲಘಟ್ಟ ತಾಲೂಕಿನ ಬಶೆಟ್ಟಿಹಳ್ಳಿಗೆ ತೆರಳಿ ಹಾನಿಯ ಬಗ್ಗೆ ಪರಿಶೀಲನೆ ನಡೆಸಿದರು.
ಸಚಿವರಾದ ಡಾ. ಸುಧಾಕರ್, ಆರ್. ಅಶೋಕ್, ಸಂಸದ ಮುನಿಸ್ವಾಮಿ, ಜಿಲ್ಲಾಧಿಕಾರಿ ಆರ್.ಲತಾ ಮತ್ತಿತರರು ಉಪಸ್ಥಿತರಿದ್ದರು.