ಉಡುಪಿ: ಅಕ್ರಮವಾಗಿ ಮದ್ಯ ಸಂಗ್ರಹಿಸಿ, ಮಾರಾಟ ಮಾಡುತ್ತಿದ್ದ ಆರೋಪಿಗಳಿಗೆ ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2015 ಅಕ್ಟೋಬರ್ 2 ರಂದು ಮಧ್ಯಾಹ್ನ 1 ಗಂಟೆಗೆ ಕೊಡವೂರು ಗ್ರಾಮದ ಮಲ್ಪೆ ಪಡುಕೆರೆ ಜಟ್ಟಿಗೆ ಹೋಗುವ ಸಾರ್ವಜನಿಕ ರಸ್ತೆಯ ಮೀನಿನ ಬಲೆ ಇಡುವ ಶೆಡ್ಡಿನ ಬಳಿ ಜಯಪ್ರಕಾಶ್ ಭಂಡಾರಿ ಮತ್ತು ಮೋಹನ ಭಂಡಾರಿ ಎಂಬುವವರು 4 ಬಾಕ್ಸ್ಗಳಲ್ಲಿ ಅಕ್ರಮವಾಗಿ ಸುಮಾರು 30 ಲೀ. ಮದ್ಯವನ್ನು ಸಂಗ್ರಹಿಸಿ ಮಾರಾಟ ಮಾಡುತ್ತಿದ್ದ ವೇಳೆ, ಮಲ್ಪೆಯ ಕರಾವಳಿ ಕಾವಲು ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಮತ್ತು ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಮದ್ಯವನ್ನು ವಶಪಡಿಸಿಕೊಂಡು, ಪ್ರಕರಣ ದಾಖಲಿಸಿ ಆರೋಪಿಗಳ ಮೇಲೆ ನ್ಯಾಯಾಲಯಕ್ಕೆ ದೋಷಾರೋಪಣಾ ಪತ್ರ ಸಲ್ಲಿಸಿರುತ್ತಾರೆ.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ರವರು ಆರೋಪಿಗಳಾದ ಜಯಪ್ರಕಾಶ್ ಭಂಡಾರಿ ಮತ್ತು ಮೋಹನ ಭಂಡಾರಿಗೆ 1 ವರ್ಷ ಕಾರಾಗೃಹ ಶಿಕ್ಷೆ ಹಾಗೂ ತಲಾ 20,000 ರೂ. ದಂಡ ವಿಧಿಸಿ ತೀರ್ಪು ನೀಡಿರುತ್ತಾರೆ.
ಸರಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಬದರೀನಾಥ್ ರೈ ವಾದ ಮಂಡಿಸಿರುತ್ತಾರೆ.