ಉಡುಪಿ: ಜಿಲ್ಲಾ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ವತಿಯಿಂದ, ಪ್ರಸಕ್ತ ಸಾಲಿನಲ್ಲಿ ವಿಶ್ವಕರ್ಮ ಸಮುದಾಯಗಳ ಜನರ ಆರ್ಥಿಕ ಅಭಿವೃದ್ಧಿಗಾಗಿ ಅನುಷ್ಠಾನಗೊಳಿಸಲಾಗುತ್ತಿರುವ ವಿವಿಧ ಯೋಜನೆಯಳಡಿ ಸಾಲ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ http://www.kvcdcl.karnataka.gov.in ಅಥವಾ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮ(ನಿ), ರಜತಾದ್ರಿ, ಮಣಿಪಾಲ, ದೂರವಾಣಿ ಸಂಖ್ಯೆ: 0820-2574882 ಅನ್ನು ಸಂಪರ್ಕಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.