Sunday, October 13, 2024
Sunday, October 13, 2024

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯಪಾಲರ ಭೇಟಿ

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ರಾಜ್ಯಪಾಲರ ಭೇಟಿ

Date:

ಉಡುಪಿ: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಿ, ಸ್ವಾಗತಿಸಲಾಯಿತು. ರಾಜ್ಯಪಾಲರು ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ಅರ್ಚನೆ ಮಾಡಿಸಿದರು.

ಶ್ರೀ ಮೂಕಾಂಬಿಕಾ ದೇವಿಗೆ ತುಪ್ಪದ ದೀಪ ಆರತಿ ಬೆಳಗಿದ ರಾಜ್ಯಪಾಲರು ಬ್ರಹ್ಮಾರ್ಪಣ ನೆರವೇರಿಸಿದರು. ದೇವಾಲಯದ ಆವರಣದಲ್ಲಿನ ಶ್ರೀ ವೀರಭದ್ರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಶ್ರೀ.ಮೂಕಾಂಬಿಕಾ ದೇವಾಲಯದ ಪ್ರದಕ್ಷಿಣೆ ಮಾಡಿ, ದೇವಿಯ ಚಿನ್ನದ ರಥ ವೀಕ್ಷಿಸಿದರು.

ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಬೈಂದೂರು ತಹಸೀಲ್ದಾರ್ ಶೋಭಾಲಕ್ಷ್ಮೀ, ಎಎಸ್ಪಿ ಕುಮಾರಚಂದ್ರ, ದೇವಾಲಯದ ಪ್ರಧಾನ ಅರ್ಚಕರು ಮತ್ತು ಸಿಬ್ಬಂದಿಗಳು, ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಸವದತ್ತಿ ಕ್ಷೇತ್ರದ ಅಭಿವೃದ್ಧಿಗೆ 25 ಕೋಟಿ ರೂ ನೀಡಿ: ಸಿಎಂಗೆ ಲಕ್ಷ್ಮಿ ಹೆಬ್ಬಾಳ್ಕರ್ ಮನವಿ

ಬೆಳಗಾವಿ, ಅ.13: ಸವದತ್ತಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಶ್ರೀ ರೇಣುಕಾ...

ಉಡುಪಿ ಸಾರ್ವಜನಿಕ ಶ್ರೀ ಶಾರದೋತ್ಸವ: ಭವ್ಯ ಶೋಭಾಯಾತ್ರೆ

ಉಡುಪಿ, ಅ.13: ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಉಡುಪಿ ಇದರ ವತಿಯಿಂದ...

ಮಾತೃಹೃದಯಿ ರತನ್ ಟಾಟಾ

ಗಣಿತನಗರ, ಅ.13: ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಅಗಲಿದ ಉದ್ಯಮ...
error: Content is protected !!