ಉಡುಪಿ: ಕೇದಾರೊತ್ಥಾನ ಟ್ರಸ್ಟ್ (ರಿ.) ಉಡುಪಿ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡ “ಹಡಿಲು ಭೂಮಿ ಕೃಷಿ ಅಂದೋಲನ”ದಡಿ ಉತ್ಪಾದಿಸಿದ ಸಂಪೂರ್ಣ ಸಾವಯವ ಕುಚ್ಚಲಕ್ಕಿ “ಉಡುಪಿ ಕೇದಾರ ಕಜೆ” ಹೆಸರಿನಲ್ಲಿ ಮಾರುಕಟ್ಟೆಗೆ ಬರಲಿದ್ದು, ಸುಮಾರು 100 ಕೆ.ಜಿ ಭತ್ತವನ್ನು ಬೆಳ್ತಿಗೆ ಅಕ್ಕಿಯನ್ನಾಗಿ ಮಾಡಿ ಇಂದು ಕೇದಾರೋತ್ಥಾನ ಟ್ರಸ್ಟ್ ಅಧ್ಯಕ್ಷರು ಶಾಸಕ ಕೆ. ರಘುಪತಿ ಭಟ್ ಅವರು ಉಡುಪಿ ಶ್ರೀಕೃಷ್ಣ ಮಠದಲ್ಲಿ ಶ್ರೀಕೃಷ್ಣ ದೇವರಿಗೆ ಸಮರ್ಪಿಸಿ ಬಳಿಕ ಪರ್ಯಾಯ ಅದಮಾರು ಮಠದ ಶ್ರೀ ಶ್ರೀ ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿಯವರಿಗೆ ಹಸ್ತಾಂತರಿಸಿದರು.
ಶ್ರೀ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ, ಕೇದಾರೋತ್ಥಾನ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಗಳಾದ ಮುರಳಿ ಕಡೆಕಾರ್, ಕೋಶಾಧಿಕಾರಿಗಳಾದ ಕೆ. ರಾಘವೇಂದ್ರ ಕಿಣಿ, ಟ್ರಸ್ಟ್ ನ ಸದಸ್ಯರಾದ ಬಿರ್ತಿ ರಾಜೇಶ್ ಶೆಟ್ಟಿ, ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಅಂಚನ್, ನಗರಸಭಾ ಸದಸ್ಯರಾದ ಬಾಲಕೃಷ್ಣ ಶೆಟ್ಟಿ, ಮಠದ ವ್ಯವಸ್ಥಾಪಕ ಗೋವಿಂದರಾಜ್, ಹರೀಶ್ ಶೆಟ್ಟಿ, ಪ್ರಭಾಕರ್ ಪೂಜಾರಿ, ಸಾಮಾಜಿಕ ಕಾರ್ಯಕರ್ತ ಮಂಜುನಾಥ್ ಹೆಬ್ಬಾರ್ ಮುಂತಾದವರು ಉಪಸ್ಥಿತರಿದ್ದರು.