ಮಲ್ಪೆ: ನಮ್ಮ ಸಂವಿಧಾನ ಪ್ರಜಾಪ್ರಭುತ್ವದ ಜೀವಾಳ. ಪ್ರಜಾಪ್ರಭುತ್ವದ ತತ್ವಗಳಿಂದ ಸಂವಿಧಾನವು ರೂಪುಗೊಂಡಿದೆ. ಇದರಿಂದ ಪ್ರತಿಯೊಬ್ಬ ನಾಗರಿಕರಿಗೂ ಸಂವಿಧಾನದ ಬಗ್ಗೆ ತಿಳಿಯುವುದು ಅತಿ ಅಗತ್ಯವಾಗಿದೆ. ಸಂವಿಧಾನ ದಿನಾಚರಣೆಯನ್ನು ಈ ಹಿನ್ನಲೆಯಲ್ಲಿ ಆಚರಿಸಬೇಕು ಎಂದು ನಿವೃತ್ತ ಪ್ರಾಧ್ಯಾಪಕ ರಾಜಕೀಯ ತಜ್ಞ ನಿತ್ಯಾನಂದ ಎನ್ ಹೇಳಿದರು.
ಅವರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐ.ಕ್ಯೂ.ಎ.ಸಿ. ಮತ್ತು ರಾಜ್ಯಶಾಸ್ತ್ರ ವಿಭಾಗದ ಆಶ್ರಯದಲ್ಲಿ ನಡೆದ ಸಂವಿಧಾನ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಿದ್ದರು.
ಕಾಲೇಜಿನ ಐ.ಕ್ಯೂ.ಎ.ಸಿ. ಸಂಚಾಲಕ ಡಾ. ಸುರೇಶ್ ರೈ ಕೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ನಿಶಾ ಎನ್. ಬಂಗೇರ ಪ್ರಾರ್ಥಿಸಿದರು. ರಾಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ. ಮಂಜುನಾಥ ಸ್ವಾಗತಿಸಿ, ಸಂಖ್ಯಾಶಾಸ್ತ್ರ ಪ್ರಾಧ್ಯಾಪಕ ಉಮೇಶ್ ಪೈ ವಂದಿಸಿದರು. ಪ್ರತಿಮಾ ಕಾರ್ಯಕ್ರಮ ನಿರ್ವಹಿಸಿದರು.