ಉಡುಪಿ: ಉಡುಪಿ ಜಿಲ್ಲೆಯಲ್ಲಿ 4 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-1, ಕುಂದಾಪುರ-1, ಕಾರ್ಕಳ-2 ಸೋಂಕಿಗೆ ಒಳಗಾಗಿದ್ದಾರೆ. 9 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76420 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 58 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 9 ರಂದು 4609 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1307511 ಮಾದರಿಗಳನ್ನು ಪರೀಕ್ಷಿಸಲಾಗಿದೆ.