Monday, October 14, 2024
Monday, October 14, 2024

ರೆಡ್‌ಕ್ರಾಸ್ ವತಿಯಿಂದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ

ರೆಡ್‌ಕ್ರಾಸ್ ವತಿಯಿಂದ ವಿಶ್ವ ಮಾನವ ಹಕ್ಕುಗಳ ದಿನಾಚರಣೆ

Date:

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ ಹಾಗೂ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಇವರ ಸಹಯೋಗದಲ್ಲಿ ಶುಕ್ರವಾರ ಅಜ್ಜರಕಾಡು ರೆಡ್‌ಕ್ರಾಸ್ ಭವನದಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯನ್ನು ಆಚರಿಸಲಾಯಿತು.

ಮಾನವ ಹಕ್ಕುಗಳ ಪ್ರೊಟೆಕ್ಷನ್ ಫೌಂಡೇಶನ್‌ನ ಜಿಲ್ಲಾ ಅಧ್ಯಕ್ಷ ಡಾ. ರವೀಂದ್ರನಾಥ ಶ್ಯಾನುಭಾಗ್ ಅವರು ಕಾರ್ಯಕ್ರಮ ಉದ್ಘಾಟಿಸಿ, ಕೋವಿಡ್‌ನಿಂದ ಮೃತಪಟ್ಟ ಆಯ್ದ 5 ಫಲಾನುಭವಿಗಳಿಗೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ರಾಜ್ಯ ಶಾಖೆ, ಉಡುಪಿ ಘಟಕದ ವತಿಯಿಂದ ನೀಡಲಾದ ದಿನಸಿ ಕಿಟ್‌ಗಳನ್ನು ವಿತರಿಸಿ, ವಿದ್ಯಾರ್ಥಿ ಪ್ರತಿನಿಧಿಗಳು ಸಮಾಜದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾದಲ್ಲಿ ಅದನ್ನು ಹೇಗೆ ಎದುರಿಸಬೇಕು ಎಂಬುದರ ಕುರಿತು ಮಾಹಿತಿ ನೀಡಿದರು.

ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಾನವ ಹಕ್ಕುಗಳ ವ್ಯಾಪ್ತಿ ವಿಶಾಲವಾಗಿದ್ದು, ಜೀವನದ ಪ್ರತಿಯೊಂದು ಹಂತದಲ್ಲಿಯೂ ಸಂವಿಧಾನ ಬದ್ಧವಾಗಿರುವ ಮಾನವ ಹಕ್ಕುಗಳನ್ನು ರಕ್ಷಣೆ ಮಾಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಭಾಸ್ಕರ್ ಶೆಟ್ಟಿ ಎಸ್, ಕಾಲೇಜಿನ ಯೂತ್ ರೆಡ್‌ಕ್ರಾಸ್ ಸಂಸ್ಥೆಯ ಸಂಚಾಲಕಿ ಶೋಭ ಆರ್, ಡಿಡಿಆರ್‌ಸಿ ಸಿಬ್ಬಂದಿಗಳು, ರೆಡ್‌ಕ್ರಾಸ್ ಸಂಸ್ಥೆಯ ಪ್ರತಿನಿಧಿಗಳು, ಜಿ. ಶಂಕರ್ ಕಾಲೇಜಿನ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...

ಕುಂದಾಪುರ: ಮಳೆಯಿಂದ ಮನೆಗೆ ಹಾನಿ

ಉಡುಪಿ, ಅ.14: ಕಾರ್ಕಳದಲ್ಲಿ ಜಿಲ್ಲೆಯಲ್ಲಿಯೇ ಅತ್ಯಧಿಕ 31.3 ಮಿಮೀ ಮಳೆಯಾಗಿದೆ. ಕುಂದಾಪುರ-14...
error: Content is protected !!