ಉಡುಪಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಹಿರಿಯ ಬಿಜೆಪಿ ಕಾರ್ಯಕರ್ತ ಮತ್ತು ಉಡುಪಿ ಪುರಸಭೆಯ ಮಾಜಿ ಅಧ್ಯಕ್ಷರಾದ ಮಲ್ಪೆ ಸೋಮಶೇಖರ್ ಭಟ್ ಅವರ ಮನೆಗೆ ತೆರಳಿ ಆಶೀರ್ವಾದ ಪಡೆದರು.
ಕೋಟ ಶ್ರೀನಿವಾಸ ಪೂಜಾರಿಯವರನ್ನು ಗೌರವಿಸಿದ ಸೋಮಶೇಖರ್ ಭಟ್, ಮತ್ತಷ್ಟು ಜನಸೇವೆ ನಿಮ್ಮಿಂದ ಮೂಡಿಬಂದು ರಾಜ್ಯಕ್ಕೆ ಒಳಿತಾಗಲಿ ಎಂದು ಶುಭ ಹಾರೈಸಿದರು.
ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೆ. ರಾಘವೇಂದ್ರ ಕಿಣಿ, ಉಡುಪಿ ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಗಿರೀಶ್ ಎಂ ಅಂಚನ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ದಿನಕರ ಪೂಜಾರಿ ಕುಂಜಿಬೆಟ್ಟು, ಕೃಷ್ಣ ಆಚಾರ್ಯ ಕಡಿಯಾಳಿ ಉಪಸ್ಥಿತರಿದ್ದರು.