ಬೆಳಗಾವಿ: ರಾಜ್ಯದ ಪೊಲೀಸರಿಗೆ ಉತ್ತಮ ಸೌಕರ್ಯ ಕಲ್ಪಿಸಲು ಸರಕಾರ ಬದ್ಧ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ.
ವಿಧಾನಸಭೆಯ ಪ್ರಶೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯರೋರ್ವರ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯದಲ್ಲಿ “ಪೊಲೀಸ್ ಗೃಹ 2025” ಯೋಜನೆ ಅನುಷ್ಠಾನಕ್ಕೆ ತರಲು ಯೋಚನೆ ನಡೆದಿದೆ. ಈ ಯೋಜನೆಯಡಿಯಲ್ಲಿ ಹತ್ತು ಸಾವಿರ ವಸತಿ ಗೃಹಗಳ ನಿರ್ಮಾಣ ಆಗಲಿದೆ.
ಪೊಲೀಸರಿಗೆ ಪರಿಣಾಮಕಾರಿಯಾಗಿ ಕರ್ತವ್ಯ ನಿರ್ವಹಿಸಲು ಅನುಕೂಲವಾಗುವಂತೆ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರಕಾರ ಶ್ರಮಿಸಲಿದೆ. ಈಗಾಗಲೇ ನೂರು ಪೊಲೀಸ್ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದ್ದು, ಹಳೆಯ ಹಾಗೂ ಶಿಥಿಲಗೊಂಡ ಕಟ್ಟಡಗಳನ್ನು ದುರಸ್ಥಿಗೊಳಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದರು.