ಉಡುಪಿ: ಉಡುಪಿ ಜಿಲ್ಲೆಯಲ್ಲಿ ಓರ್ವ ವ್ಯಕ್ತಿ (ಕಾರ್ಕಳ ತಾಲೂಕಿನವರು) ಸೋಂಕಿತರಾಗಿದ್ದಾರೆ. 8 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76458 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 29 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ 477 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 14 ರಂದು 2912 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1320702 ಮಾದರಿಗಳನ್ನು ಪರೀಕ್ಷಿಸಲಾಗಿದೆ.