ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 7,145 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಇದೇ ವೇಳೆ 8,706 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 84,565 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,41,71,471 ಮಂದಿ ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಗಳಲ್ಲಿ 289 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,77,158 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.
ಇಲ್ಲಿಯವರೆಗೆ 1,36,66,05,173 ಡೋಸ್ ಲಸಿಕೆ ನೀಡಲಾಗಿದೆ.