ಉಡುಪಿ: ಉದ್ಯೋಗಾಧಾರಿತ ತರಬೇತಿಗಳಿಗೆ ಪ್ರಸಿದ್ಧಿ ಪಡೆದಿರುವ ಉನ್ನತಿ ಕ್ಯಾರಿಯರ್ ಅಕಾಡೆಮಿಯಲ್ಲಿ ಇಂದು “ಕೌಶಲ್ಯಾಭಿವೃದ್ಧಿಯಿಂದ ಯುವ ಸಬಲೀಕರಣ”ದ ಕುರಿತು ಕಾರ್ಯಕ್ರಮ ನಡೆಯಿತು.
ಉಡುಪಿ ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಕುಮಾರ್ ಶೆಟ್ಟಿಯವರು ಭಾಗವಹಿಸಿ ಮಾತನಾಡುತ್ತಾ, ಇಂದಿನ ಯುವಜನರು ಉದ್ಯೋಗಕ್ಕೆ ಬೇಕಾಗುವ ಕೌಶಲ್ಯ ವೃದ್ಧಿಸಿಕೊಂಡರೆ ಉದ್ಯೋಗ ಗಿಟ್ಟಿಸಲು ಹಲವಾರು ಅವಕಾಶಗಳಿವೆ. ಆಪ್ಟಿಟ್ಯೂಡ್, ಲಾಜಿಕಲ್ ರೀಸನಿಂಗ್, ಇಂಗ್ಲಿಷ್ ಕಮ್ಯುನಿಕೇಶನ್ ನಂತಹ ಅನೇಕ ಕೌಶಲ್ಯಗಳು ಅತಿ ಅವಶ್ಯಕ.
ಉನ್ನತಿ ಕ್ಯಾರಿಯರ್ ಅಕಾಡೆಮಿಯು ಉಡುಪಿಯಲ್ಲಿ ಇಂತಹ ಒಂದು ಉತ್ತಮ ಸಂಸ್ಥೆ ಸ್ಥಾಪಿಸುವ ಮೂಲಕ ಸಾವಿರಾರು ಉದ್ಯೋಗಾಕಾಂಕ್ಷಿಗಳಿಗೆ ಅವಕಾಶಗಳನ್ನು ಒದಗಿಸುತ್ತಿರುವುದು ಶ್ಲಾಘನೀಯ ಎಂದರು.
ಇಂಟರ್ನ್ಷಿಪ್ ನಿಂದ ಉದ್ಯೋಗ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಪ್ರಮಾಣ ಪತ್ರವನ್ನು ವಿತರಿಸಲಾಯಿತು.
ಸಂಸ್ಥೆಯ ಸ್ಥಾಪಕ ಪ್ರೇಮ್ ಪ್ರಸಾದ್ ಶೆಟ್ಟಿ, ನಿರ್ದೇಶಕಿ ಪೌರ್ಣಮಿ ಪ್ರೇಮ್ ಶೆಟ್ಟಿ ಉಪಸ್ಥಿತರಿದ್ದರು.
ತರಬೇತುದಾರ ನವೀನ್, ಪಿಆರ್ ಓ ಜ್ಯೋತಿ ಸಾಲಿಗ್ರಾಮ ಕಾರ್ಯಕ್ರಮ ನಿರೂಪಿಸಿದರು. ಪ್ರಿಯ ಮೂಲ್ಯ ಸ್ವಾಗತಿಸಿ, ಸೌಮ್ಯ ವಂದಿಸಿದರು.