ಹುಯೆಲ್ವಾ, ಸ್ಪೇನ್: ಇಂದು ಸ್ಪೇನ್‌ನ ಹುಯೆಲ್ವಾದಲ್ಲಿ ನಡೆದ ಬಿ.ಡಬ್ಲ್ಯೂ.ಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಕಿಡಂಬಿ ಶ್ರೀಕಾಂತ್ ಸಿಂಗಾಪುರದ ಲೋಹ್ ಕೀನ್ ಯೂ ವಿರುದ್ಧ 15-21, 20-22 ರಿಂದ ಹೋರಾಡಿ ಐತಿಹಾಸಿಕ ಬೆಳ್ಳಿ ಪದಕವನ್ನು ಪಡೆದರು. ಶ್ರೀಕಾಂತ್ ರನ್ನರ್ಸ್ ಅಪ್ ಸ್ಥಾನ ಪಡೆದ ಮೊದಲ ಭಾರತೀಯ ಎಂಬ ಇತಿಹಾಸ ನಿರ್ಮಿಸಿದ್ದಾರೆ.
ಮಾಜಿ ವಿಶ್ವ ನಂಬರ್ ಒನ್ ಆಟಗಾರ ಶ್ರೀಕಾಂತ್ ನಿನ್ನೆ ವಿಶ್ವ ಚಾಂಪಿಯನ್‌ಶಿಪ್‌ನ ಸಿಂಗಲ್ಸ್ ಫೈನಲ್ ತಲುಪಿದ ಮೊದಲ ಭಾರತೀಯ ಪುರುಷ ಬ್ಯಾಡ್ಮಿಂಟನ್ ಆಟಗಾರ ಎಂಬ ಕೀರ್ತಿಗೆ ಭಾಜನರಾಗಿದ್ದರು.
ಸೆಮಿಫೈನಲ್‌ನಲ್ಲಿ ಶ್ರೀಕಾಂತ್ 17-21, 21-14, 21-17 ರಿಂದ ಒಂದು ಗಂಟೆ ಒಂಬತ್ತು ನಿಮಿಷಗಳ ಕಾಲ ನಡೆದ ರೋಚಕ ಸ್ಪರ್ಧೆಯಲ್ಲಿ ಲಕ್ಷ್ಯ ಸೇನ್ ಅವರನ್ನು ಸೋಲಿಸಿದರು. ಲಕ್ಷ್ಯ ಕಂಚಿನ ಪದಕಕ್ಕೆ ತೃಪ್ತಿಪಟ್ಟರು.
ತನ್ಮೂಲಕ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನ ಪುರುಷರ ಸಿಂಗಲ್ಸ್‌ನಲ್ಲಿ ಭಾರತ ಎರಡು ಪದಕಗಳನ್ನು ಪಡೆದಿದೆ.