Sunday, November 24, 2024
Sunday, November 24, 2024

ಸಮಗ್ರ ಕೃಷಿ ತರಬೇತಿ ಸಮಾರೋಪ

ಸಮಗ್ರ ಕೃಷಿ ತರಬೇತಿ ಸಮಾರೋಪ

Date:

ಬ್ರಹ್ಮಾವರ: ಜಿಲ್ಲಾ ಪಂಚಾಯತ್ ಉಡುಪಿ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಪ್ರಾಯೋಜಕತ್ವದಲ್ಲಿ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನ ಕೇಂದ್ರ ಬ್ರಹ್ಮಾವರ, ಐ .ಸಿ. ಎ .ಆರ್, ಕೃಷಿ ವಿಜ್ಞಾನ ಕೇಂದ್ರ ಬ್ರಹ್ಮಾವರ ಇವರುಗಳ ಸಹಯೋಗದೊಂದಿಗೆ ಉನ್ನತಿ ಯೋಜನೆಯಡಿಯಲ್ಲಿ ‘ಸಮಗ್ರ ಕೃಷಿ ತರಬೇತಿ’ ಸಮಾರೋಪ ಕಾರ್ಯಕ್ರಮ ಕೃಷಿ ಕೇಂದ್ರ ಬ್ರಹ್ಮಾವರದಲ್ಲಿ ನಡೆಯಿತು.

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ 100 ದಿನ ಕೆಲಸ ಪೂರೈಸಿದ ಅಕುಶಲ ಕಾರ್ಮಿಕರ ಕುಟುಂಬಗಳ ಸದಸ್ಯರಿಗೆ ಕೌಶಲ್ಯ ತರಬೇತಿಯನ್ನು ನೀಡುವ ಉನ್ನತಿ ಯೋಜನೆಯಡಿಯಲ್ಲಿ ಸಮಗ್ರ ಕೃಷಿ ತರಬೇತಿ ಪಡೆದ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರವನ್ನು ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು ಎಂ ವಿತರಿಸಿ ಶುಭ ಹಾರೈಸಿದರು.

ಕೆ .ವಿ .ಕೆ .ಬ್ರಹ್ಮಾವರ ಸಹ ಸಂಶೋಧನ ನಿರ್ದೇಶಕ ಡಾ. ಲಕ್ಷ್ಮಣ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೃಷಿ ಡಿಪ್ಲೋಮಾ ಮಹಾವಿದ್ಯಾಲಯ ಪ್ರಾಂಶುಪಾಲ ಡಾ. ಸುಧೀರ್ ಕಾಮತ್ ಕೆ ವಿ, ಹಿರಿಯ ವಿಜ್ಞಾನಿ ಮತ್ತು ಮುಖ್ಯಸ್ಥರು ಕೆ.ವಿ.ಕೆ. ಡಾ. ಧನಂಜಯ, ನಾಮ ನಿರ್ದೇಶಿತ ಸದಸ್ಯ ರಾಘವೇಂದ್ರ ಉಪ್ಪೂರು, ಜಿಲ್ಲಾ ಪಂಚಾಯತ್ ಸಹಾಯಕ ಯೋಜನಾಧಿಕಾರಿ ಜೇಮ್ಸ್ ಡಿಸಿಲ್ವ, ಎನ್.ಆರ್.ಎಲ್.ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಉಪಸ್ಥಿತರಿದ್ದರು.

ವಿಜ್ಞಾನಿ ಡಾ.ಚೈತನ್ಯ ಹೆಚ್ ಎಸ್ ಸ್ವಾಗತಿಸಿ, ಯುವ ವೃತ್ತಿಪರ ಜಯಮಾಲಾ ವಂದಿಸಿದರು. ಜಿಲ್ಲಾ ವ್ಯವಸ್ಥಾಪಕಿ ನವ್ಯಾ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!