ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ (ನಿ) ಮುಳಿಹಿತ್ಲು, ಮಂಗಳೂರು ಇದರ “ಸಿ”ವರ್ಗದ ಸದಸ್ಯರ ಮಕ್ಕಳಿಗೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
2020-21ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇ.85, ದ್ವಿತೀಯ ಪಿಯುಸಿ/ತತ್ಸಮಾನ ತಾಂತ್ರಿಕ ಪರೀಕ್ಷೆಯಲ್ಲಿ ಶೇ. 80, ಅಂತಿಮ ಪದವಿ ಪರೀಕ್ಷೆಯಲ್ಲಿ ಶೇ 70 ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ದಿನಾಂಕ 15.01.2022 ರೊಳಗೆ ಅರ್ಜಿ ಸಲ್ಲಿಸಬಹುದು. ಅರ್ಜಿಗಳನ್ನು ಮೀನುಗಾರಿಕಾ ಪ್ರಾಥಮಿಕ ಸಹಕಾರಿ ಸಂಘಗಳು ಮತ್ತು ಫೆಡರೇಶನ್‌ನ ಶಾಖಾ ಕಚೇರಿಗಳಿಂದ ಪಡೆದುಕೊಳ್ಳುವಂತೆ ಫೆಡರೇಶನಿನ ಅಧ್ಯಕ್ಷರಾದ ಯಶ್‌ಪಾಲ್ ಎ. ಸುವರ್ಣರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.