ಉಡುಪಿ: ಉಡುಪಿ ಜಿಲ್ಲೆಯಲ್ಲಿ 14 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-14, ಕುಂದಾಪುರ-0, ಕಾರ್ಕಳ-0 ಸೋಂಕಿಗೆ ಒಳಗಾಗಿದ್ದಾರೆ. 4 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 76497 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ 46 ಸಕ್ರಿಯ ಪ್ರಕರಣಗಳಿವೆ.
ಉಡುಪಿ ತಾಲೂಕಿನ 63 ವರ್ಷದ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ 479 ಮಂದಿ ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಡಿಸೆಂಬರ್ 24 ರಂದು 4189 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ. ಇಲ್ಲಿಯವರೆಗೆ ಒಟ್ಟು 1350356 ಮಾದರಿಗಳನ್ನು ಪರೀಕ್ಷಿಸಲಾಗಿದೆ.