ನವದೆಹಲಿ: 24 ಗಂಟೆಗಳಲ್ಲಿ ದೇಶಾದ್ಯಂತ 16,764 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ತಿಳಿಸಿದೆ.
ಹಲವಾರು ತಿಂಗಳ ನಂತರ ದೇಶಾದ್ಯಂತ ಒಂದೇ ದಿನ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಏರಿಕೆ ಕಂಡಿದ್ದು, ಎಚ್ಚರಿಕೆಯ ಕರೆಗಂಟೆಯಾಗಿದೆ.
ಇದೇ ವೇಳೆ 7,585 ಮಂದಿ ಕಳೆದ 24 ತಾಸಿನಲ್ಲಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಒಟ್ಟು 91,361 ಸಕ್ರಿಯ ಪ್ರಕರಣಗಳಿವೆ. ಇಲ್ಲಿಯವರೆಗೆ 3,42,66,363 ಮಂದಿ ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಗಳಲ್ಲಿ 220 ಮಂದಿ ಸಾವನ್ನಪ್ಪಿದ್ದಾರೆ. ಇಲ್ಲಿಯವರೆಗೆ ಒಟ್ಟು 4,81,080 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ 144.54 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.
ಒಮಿಕ್ರಾನ್ ಪ್ರಕರಣಗಳ ಒಟ್ಟು ಸಂಖ್ಯೆ 1,270. ಮಹಾರಾಷ್ಟ್ರ (450) ದೆಹಲಿ (320)
ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.