ಕೋಟ: ಕೋಟತಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊರಗ ಕಾಲೋನಿಯಲ್ಲಿ ಸೋಮವಾರ ನಡೆದ ದೌರ್ಜನ್ಯ ಪ್ರಕರಣದ ಹಿನ್ನಲ್ಲೆಯಲ್ಲಿ ಶನಿವಾರ ಗೃಹ ಸಚಿವ ಅರಗ ಜ್ಞಾನೇಂದ್ರ ದಿಢೀರ್ ಭೇಟಿ ನೀಡಿ ಕೊರಗ ಸಮುದಾಯದವರೊಂದಿಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವರು, ತಪ್ಪು ಎಸಗಿರುವ ಪೋಲಿಸರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಇಂತಹ ಘಟನೆ ಮತ್ತೆ ಮರುಕಳಿಸದಂತೆ ಪೋಲಿಸ್ ಇಲಾಖೆಗೆ ಸೂಚನೆ ನೀಡಲಾಗಿದೆ.
ಮೆಹಂದಿ ಕಾರ್ಯಕ್ರಮದಲ್ಲಿ ನಡೆದ ದೌರ್ಜನ್ಯ ಕುರಿತು ಸಿಐಡಿ ತನಿಖೆಗೆ ಒಪ್ಪಿಸಿದಲ್ಲದೆ ಹಲ್ಲೆಗೊಳಗಾದ ಕೊರಗ ಸಮುದಾಯದ 6 ಮಂದಿಗೆ ತಲಾ ಎರಡು ಲಕ್ಷ ರೂ ಪರಿಹಾರ ಘೋಷಿಸಿ ಮೊದಲ ಹಂತದಲ್ಲಿ 50 ಸಾವಿರ ರೂ ಚೆಕ್ ನ್ನು ಆರು ಮಂದಿಗೆ ಹಸ್ತಾಂತರಿಸಿದರು.
ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕೋಟತಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಅಶ್ವಿನಿ ದಿನೇಶ್, ಉಪಾಧ್ಯಕ್ಷ ವಾಸು ಪೂಜಾರಿ, ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷ ಅಜಿತ್ ದೇವಾಡಿಗ, ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ್ ಪೂಜಾರಿ, ಸಾಲಿಗ್ರಾಮ ಪಟ್ಟಣ ಪಂಚಾಯತ್ ಅಧ್ಯಕ್ಷೆ ಸುಲತಾ ಹೆಗ್ಡೆ, ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ., ಎಸ್ಪಿ ವಿಷ್ಣುವರ್ಧನ್, ಡಿವೈಎಸ್‌ಪಿ ಸುಧಾಕರ್ ನಾಯ್ಕ್, ಕೋಟ ಪ್ರಭಾರ ಎಸ್ ಐ ತಿಮ್ಮೇಶ್, ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್‌ಮೂರ್ತಿ, ಕೋಟ ಕಂದಾಯ ಅಧಿಕಾರಿ ರಾಜು, ಬ್ರಹ್ಮಾವರ ಕಂದಾಯ ಅಧಿಕಾರಿ ಲಕ್ಷ್ಮೀನಾರಾಯಣ ಭಟ್, ಸಾಮಾಜಿಕ ಕಾರ್ಯಕರ್ತ ದಿನೇಶ್ ಗಾಣಿಗ ಮತ್ತಿತರರು ಉಪಸ್ಥಿತರಿದ್ದರು.