ಕಾರ್ಕಳ: ಭಾರತ ಸರಕಾರ ಯುವ ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ ಉಡುಪಿ, ಚೈತನ್ಯ ಮಿತ್ರ ಮಂಡಳಿ ಕಲ್ಯಾ, ಚೈತನ್ಯ ಯುವತಿ ಮತ್ತು ಮಹಿಳಾ ಮಂಡಳಿ ಕಲ್ಯಾ ಇವರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲ್ಯಾ ಇದರ ವಠಾರದಲ್ಲಿ ಜರುಗಿತು.
ನೆಹರು ಯುವ ಕೇಂದ್ರ ಉಡುಪಿ ಜಿಲ್ಲಾ ಯುವ ಸಮನ್ವಯ ಅಧಿಕಾರಿ ವಿಲ್ಫ್ರೆಡ್ ಡಿಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಕ್ರೀಡಾಕೂಟಗಳನ್ನು ಆಯೋಜಿಸುವ ಮೂಲಕ ಗ್ರಾಮೀಣ ಪ್ರತಿಭೆಗಳನ್ನು ಬೆಳಕಿಗೆ ತರಲು ಸಾಧ್ಯವಾಗುತ್ತದೆ. ಗ್ರಾಮೀಣ ಜನರು ಪರಸ್ಪರ ಬೆರೆತು ತಮ್ಮ ಸಂಬಂಧವನ್ನು ಗಟ್ಟಿಗೊಳಿಸಲು, ಕ್ರೀಡಾ ಸ್ಪೂರ್ತಿ ಹೆಚ್ಚಿಸಲು ಇಂತಹ ಕ್ರೀಡಾಕೂಟಲು ಸಹಕಾರಿಯಾಗಲಿ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅನುಪ್ ಆಚಾರ್ಯ ವಹಿಸಿದರು. ವೇದಿಕೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಲ್ಯಾ ಸೇವಾ ಪ್ರತಿನಿಧಿ ಸುಧೇಶ್ ಶೆಟ್ಟಿ, ರಂಜನ್, ಚೈತನ್ಯ ಯುವತಿ ಮತ್ತು ಮಹಿಳಾ ಮಂಡಳಿ ಸ್ಥಾಪಕಾಧ್ಯಕ್ಷರಾದ ರೂಪಾ ಯತೀಶ್ ಉಪಸ್ಥಿತರಿದ್ದರು. ಯತೀಶ್ ಎನ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.