Sunday, September 22, 2024
Sunday, September 22, 2024

ರೆಡ್‌ಕ್ರಾಸ್ ವತಿಯಿಂದ ಕೋವಿಡ್ ಸಂತ್ರಸ್ಥರಿಗೆ ದಿನಸಿ ಕಿಟ್ ವಿತರಣೆ

ರೆಡ್‌ಕ್ರಾಸ್ ವತಿಯಿಂದ ಕೋವಿಡ್ ಸಂತ್ರಸ್ಥರಿಗೆ ದಿನಸಿ ಕಿಟ್ ವಿತರಣೆ

Date:

ಉಡುಪಿ: ರೆಡ್ ಕ್ರಾಸ್ ಸಂಸ್ಥೆಯು ಅಂತರಾಷ್ಟ್ರ‍ೀಯ ಸೇವಾ ಸಂಸ್ಥೆಯಾಗಿದ್ದು, ಮಾನವೀಯ ನೆಲೆಯಲ್ಲಿ ಸೇವೆ ಮಾಡುತ್ತಿದ್ದು, ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯಾದ್ಯಂತ ಮಾಸ್ಕ್, ಸೋಪು, ಸ್ಯಾನಿಟೈಸರ್‌ಗಳನ್ನು ವಿತರಿಸಲಾಗಿರುತ್ತದೆ ಎಂದು ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು.

ಅವರು ನಗರದ ರೆಡ್ ಕ್ರಾಸ್ ಭವನದಲ್ಲಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ ಮತ್ತು ಜಿಲ್ಲಾ ವಿಕಲ ಚೇತನರ ಪುನರ್ವಸತಿ ಕೇಂದ್ರದ ಸಹಯೋಗದೊಂದಿಗೆ ಕೋವಿಡ್‌ನಿಂದ ನೊಂದ ಬಡ ಫಲಾನುಭವಿಗಳಿಗೆ ರಾಜ್ಯ ಶಾಖೆಯಿಂದ ನೀಡಲ್ಪಟ್ಟ ದಿನಸಿ ಸಾಮಾಗ್ರಿಗಳ ಕಿಟ್ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ರೆಡ್ ಕ್ರಾಸ್‌ನ ಅಂಗಸಂಸ್ಥೆಯಾದ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿಕಲಚೇತನ ಫಲಾನುಭವಿಗಳಿಗೆ ಸಿಗುವ ಸೌಲಭ್ಯ ಹಾಗೂ ಕೃತಕ ಕಾಲು ನೀಡುವಿಕೆ, ತಜ್ಞರಾದ ಆಡಿಯೋಲಿಜಿಸ್ಟ್, ಸೈಕ್ಯಾಟ್ರಿಕ್ ಫಿಸಿಯೋಥೆರಪಿಸ್ಟ್ರವರ ಸೇವೆಯನ್ನು ಸಾರ್ವಜನಿಕರು ಬಳಸುವಂತೆ ತಿಳಿಸಿದ ಅವರು, ಮುಂದಿನ ದಿನಗಳಲ್ಲಿ ಕೋವಿಡ್‌ನಿಂದ ಮೃತಪಟ್ಟ ಮನೆಯ ಸದಸ್ಯರು ಸಂಬಂಧಪಟ್ಟ ದಾಖಲೆಗಳನ್ನು ಸಲ್ಲಿಸಿದ್ದಲ್ಲಿ ಹೊಲಿಗೆ ಮೆಶಿನ್ ನೀಡಲಾಗುವುದು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದ ಯುನಿಟ್ ಇನ್ ಚಾರ್ಜ್ ಜಯಶ್ರೀ, ರೆಡ್ ಕ್ರಾಸ್ ಮತ್ತು ಡಿಡಿಆರ್‌ಸಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ರೆಡ್‌ಕ್ರಾಸ್ ಸಂಸ್ಥೆಯ ಜಿಲ್ಲಾ ಘಟಕದ ಗೌರವ ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಕೆ ಸ್ವಾಗತಿಸಿ, ಆಡಳಿತ ಮಂಡಳಿ ಸದಸ್ಯೆ ರಮಾದೇವಿ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!