ಉಡುಪಿ: ಆಜಾದಿ ಕಾ ಅಮೃತ್ ಮಹೋತ್ಸವ ಅಭಿಯಾನದ ಅಡಿಯಲ್ಲಿ ಉಡುಪಿ ಕ್ಷಯ ಘಟಕದ ಎಲ್ಲಾ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳಿಗೆ ಸೆನ್ಸಿಟೈಸೇಶನ್ ಟ್ರೈನಿಂಗ್ ಕಾರ್ಯಕ್ರಮ ಉಡುಪಿ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ತಾಲೂಕು ಅರೋಗ್ಯ ಅಧಿಕಾರಿ ಡಾ. ವಾಸುದೇವ್ ಅವರು ಕೈಪಿಡಿ ಬಿಡುಗಡೆಗೊಳಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕ್ಷಯ ರೋಗ ನಿರ್ಮೂಲನಾ ಕಚೇರಿಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಜಿಲ್ಲಾ ಪಿಪಿಎಮ್ ಸಂಯೋಜಕ ಸುರೇಶ್ ತರಬೇತಿ ನೀಡಿದರು. ಕ್ಷಯ ಘಟಕದ ಮೇಲ್ವಿಚಾರಕರಾದ ಪ್ರಶಾಂತ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.