ಮಲ್ಪೆ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಉಡುಪಿ, ಐ.ಕ್ಯೂ.ಎ.ಸಿ. ಹಾಗೂ ಉದ್ಯೋಗ ಮಾಹಿತಿ ಘಟಕಗಳ ಸಂಯುಕ್ತಾಶ್ರಯದಲ್ಲಿ ಇಂದು ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಕುರಿತು ಕಾರ್ಯಾಗಾರ ನಡೆಯಿತು.
ಸರಕಾರಿ ಪ್ರಥಮ ದಜೆ ಕಾಲೇಜು ಕೋಟ ಪಡುಕರೆ ಉಪನ್ಯಾಸಕರಾದ ಮನೋಹರ ಉಪ್ಪುಂದ ಇವರು ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಕುರಿತು ವಿಶೇಷ ಮಾಹಿತಿ ನೀಡಿದರು ಹಾಗೂ ಮೆಂಟಲ್ ಎಬಿಲಿಟಿ ಬಗ್ಗೆ ಪ್ರಶ್ನೆಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಪ್ರಭಾರ ಪ್ರಾಂಶುಪಾಲರಾದ ಡಾ. ಸುರೇಶ್ ರೈ ಕೆ. ವಹಿಸಿ, ಸ್ಪರ್ಧಾತ್ಮಕ ಪರೀಕ್ಷೆಯ ಮಹತ್ವವನ್ನು ತಿಳಿಸಿದರು. ಉದ್ಯೋಗ ಮಾಹಿತಿ ಘಟಕ ಸಂಚಾಲಕ ಉಮೇಶ್ ಪೈ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.
ಉದ್ಯೋಗ ಮಾಹಿತಿ ಘಟಕ ಸಂಚಾಲಕ ಡಾ. ಹೆಚ್.ಕೆ. ವೆಂಕಟೇಶ್ ವಂದಿಸಿದರು. ವಾಣಿಜ್ಯ ವಿಭಾಗದ ಪ್ರಾಧ್ಯಾಪಕಿ ಡಾ. ಮೇವಿ ಮಿರಾಂದ ಉಪಸ್ಥಿತರಿದ್ದರು.