ಉಡುಪಿ: ಪ್ರಸ್ತುತ ಸಾಲಿನಲ್ಲಿ ಕೇಂದ್ರ ಸರ್ಕಾರವು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಭತ್ತ ಸಾಮಾನ್ಯ ದರ 1,940 ರೂ. ಹಾಗೂ ಗ್ರೇಡ್ ಎ ಭತ್ತಕ್ಕೆ 1,960 ರೂ. ದರ ನಿಗದಿಪಡಿಸಿದ್ದು, ಜಿಲ್ಲೆಯ ಸ್ಥಳೀಯ ಕುಚ್ಚಲಕ್ಕಿ ಪ್ರಬೇಧಗಳಾದ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮ ತಳಿಗಳನ್ನು ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲಾಗುವುದು.
ಮುಂಗಾರು ಋತುವಿನಲ್ಲಿ ರೈತರು ಬೆಳೆದಿರುವ ಭತ್ತವನ್ನು ಫ್ರೂಟ್ಸ್ ತಂತ್ರಾಶದ ಮೂಲಕ ಅಧಿಕೃತವಾಗಿ ನೋಂದಣಿ ಮಾಡಿದಂತಹ ರೈತರಿಂದ ಭತ್ತವನ್ನು ಖರೀದಿಸಲು ರಾಜ್ಯ ಆಹಾರ ನಿಗಮದಿಂದ ಕಾರ್ಕಳ, ಉಡುಪಿ, ಹಾಗೂ ಕುಂದಾಪುರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದಲ್ಲಿ ಖರೀದಿ ಕೇಂದ್ರ ತೆರೆಯಲಾಗಿದ್ದು, ಮಾರ್ಚ್ 30 ರ ವರೆಗೆ ಶೇಖರಿಸುವ ಮತ್ತು ಪರಿವರ್ತಿಸುವ ಕಾರ್ಯವನ್ನು ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.