ಉಡುಪಿ: ಕರಾವಳಿ ಜಿಲ್ಲೆಯ ನಾಡ ದೋಣಿ ಮೀನುಗಾರರ ಬೇಡಿಕೆಗೆ ಸ್ಪಂದಿಸಿ 3540 ಕಿಲೋ ಲೀಟರ್ ಸೀಮೆ ಎಣ್ಣೆ ಬಿಡುಗಡೆಗೊಳಿಸಿದ ಕೇಂದ್ರ ಸರಕಾರಕ್ಕೆ ಸಮಸ್ತ ಮೀನುಗಾರರ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷರಾದ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಪ್ರಸ್ತುತ 2021-22 ನೇ ಸಾಲಿನಲ್ಲಿ ಈಗಾಗಲೇ 7080 ಕಿಲೋ ಲೀಟರ್ ಸೀಮೆಎಣ್ಣೆ ಬಿಡುಗಡೆಗೊಳಿಸಿದ್ದು, ಇದೀಗ ನಾಡದೋಣಿ ಗಾರರ ಬೇಡಿಕೆಯನ್ನು ಪುರಸ್ಕರಿಸಿ ಹೆಚ್ಚುವರಿ ಸೀಮೆಎಣ್ಣೆ ಬಿಡುಗಡೆಗೊಳಿಸಿದೆ.
ರಾಜ್ಯದ 10,100ಕ್ಕೂ ಅಧಿಕ ನಾಡ ದೋಣಿಯ 60,000 ಕ್ಕಿಂತಲೂ ಹೆಚ್ಚಿನ ಮೀನುಗಾರರಿಗೆ ಅನುಕೂಲವಾಗಿದ್ದು, ಈ ಬಗ್ಗೆ ವಿಶೇಷ ಮುತುವರ್ಜಿ ವಹಿಸಿ ಸೀಮೆ ಎಣ್ಣೆ ಬಿಡುಗಡೆಗೊಳಿಸಿದ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಪೆಟ್ರೋಲಿಯಂ ಸಚಿವರಾದ ಹರ್ದೀಪ್ ಸಿಂಗ್ ಪುರಿ, ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಾದ ಶೋಭಾ ಕರಂದ್ಲಾಜೆ, ಸಂಸದರಾದ ನಳಿನ್ ಕುಮಾರ್ ಕಟೀಲ್, ಬಿ ವೈ ರಾಘವೇಂದ್ರ ಹಾಗೂ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಅಂಗಾರ ರವರಿಗೆ ಧನ್ಯವಾದ ಸಲ್ಲಿಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.