ಕೋಟ: ಲಕ್ಷ್ಮೀ ಸೋಮ ಬಂಗೇರ ಸರಕಾರಿ ಪ್ರಥಮ ದರ್ಜೆ ಕಾಲೇಜು ಕೋಟ-ಪಡುಕರೆಯಲ್ಲಿ ರಾಜಕೀಯ ಶಾಸ್ತ್ರ ವಿಭಾಗದ ಚುನಾವಣಾ ಸಾಕ್ಷರತಾ ಕ್ಲಬ್ ಆಶ್ರಯದಲ್ಲಿ ಮತದಾರರ ದಿನಾಚರಣೆ ನಡೆಯಿತು.
ಪ್ರಜಾಪ್ರಭುತ್ವದಲ್ಲಿ ಮತದಾರರ ಶಕ್ತಿ ಪಾತ್ರದ ಕುರಿತಾಗಿ ವಿಚಾರ ಮಂಡಿಸಿದ ಪ್ರಶಾಂತ್ ನೀಲಾವರ, ದೇಶದ ಆಡಳಿತ ವ್ಯವಸ್ಥೆಯನ್ನು ರೂಪಿಸುವ ಮತದಾರ ಪ್ರಜ್ಞಾವಂತನಾದಲ್ಲಿ ಮಾತ್ರ ಚುನಾವಣ ಅವ್ಯವಹಾರಗಳನ್ನು ತಡೆಗಟ್ಟಿ ಮೌಲ್ಯಯುತವಾದ ಜನನಾಯಕರನ್ನು ರಾಜಕೀಯದ ಮುನ್ನಲೆಗೆ ತರಲು ಸಾಧ್ಯ.
ಕಲುಶಿತ ರಾಜಕೀಯದಿಂದ ಬೇಸತ್ತು ಮತದಾರ ತಟಸ್ಥನಾದರೆ ಪ್ರಜಾಪ್ರಭುತ್ವವೇ ಅಪಾಯದಲ್ಲಿ ಸಿಲುಕಬಹುದೆಂದರು. ಪ್ರಾಂಶುಪಾಲರಾದ ನಿತ್ಯಾನಂದ ಗಾಂವ್ಕರ್ ವಿದ್ಯಾರ್ಥಿಗಳಿಗೆ ಮತದಾರರ ಪ್ರತಿಜ್ಞಾವಿಧಿ ಬೋಧಿಸಿ ಯುವಜನತೆ ಸಂವಿಧಾನ, ಸಂಸದೀಯ ಪ್ರಜಾಪ್ರಭುತ್ವ, ಚುನಾವಣಾ ಆಯೋಗ, ಭಾರತೀಯ ಪಕ್ಷಪದ್ಧತಿ ಇತ್ಯಾದಿಗಳ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ತಮ್ಮ ಮತದಾನ ಮಾಡಬೇಕೆಂದರು.
ಕಾರ್ಯಕ್ರಮದಲ್ಲಿ ಬೋಧಕ-ಬೋಧಕೇತರ ವೃಂದದವರು ಚುನಾವಣಾ ಸಾಕ್ಷರತಾ ಕ್ಲಬ್ ವಿದ್ಯಾರ್ಥಿ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.