ಕೋಟ: ವಡ್ಡರ್ಸೆ ಗ್ರಾ.ಪಂ. ಕಚೇರಿ ಸಮೀಪ ನೂತನವಾಗಿ ಆರಂಭಗೊಂಡ ಗ್ರಾಮ ಒನ್ ಸೇವಾ ಕೇಂದ್ರಕ್ಕೆ ಉಡುಪಿ ಜಿಲ್ಲಾ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರು ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಿಗೆ ಅಲೆಯುವುದನ್ನು ತಪ್ಪಿಸಲು ಮುಂದಾಗಿರುವ ರಾಜ್ಯ ಸರಕಾರ ಗ್ರಾ.ಪಂ. ವ್ಯಾಪ್ತಿಯಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಮುಂದಾಗಿದ್ದು, ಪದವೀಧರ ಯುವ ಜನತೆಗೆ ಕೇಂದ್ರ ನಿರ್ಮಿಸಲು ಅವಕಾಶ ಕಲ್ಪಿಸಿದೆ.
ಇದರ ಮೂಲಕ ಸರಕಾರಿ ಸೇವೆಗಳನ್ನು ಪಡೆಯಲು ಗ್ರಾಮೀಣ ಭಾಗದ ಜನರು ತಾಲೂಕು ಅಥವಾ ಜಿಲ್ಲಾ ಕೇಂದ್ರಗಳಿಗೆ ತೆರಳುವ ಸ್ಥಿತಿ ತಪ್ಪಲಿದ್ದು, ಗ್ರಾಮ ಕೇಂದ್ರದಲ್ಲೇ ಎಲ್ಲಾ ಸೇವೆ ಲಭ್ಯವಾಗಲಿದೆ. ಈ ಮೂಲಕ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕನಸು ನನಸಾಗಲಿದೆ ಎಂದರು.
ವಡ್ಡರ್ಸೆ ಗ್ರಾ.ಪಂ. ಅಧ್ಯಕ್ಷೆ ಸವಿತಾ ಪ್ರಕಾಶ್ ಆಚಾರ್ಯ, ಗ್ರಾ.ಪಂ. ಸದಸ್ಯ ಕೋಟಿ ಪೂಜಾರಿ, ಚಂದ್ರಶೇಖರ್ ಶೆಟ್ಟಿ, ಹರೀಶ್ ಶೆಟ್ಟಿ, ಭಾಸ್ಕರ್ ಪೂಜಾರಿ, ಪಾರ್ವತಿ ದೇವಾಡಿಗ, ಕೋಟ ಕಂದಾಯ ಅಧಿಕಾರಿ ರಾಜು, ವಿ.ಎ. ವಿಜಯ್, ಸಾಲಿಗ್ರಾಮ ಪ.ಪಂ. ಸದಸ್ಯ ಸಂಜೀವ ದೇವಾಡಿಗ, ವಡ್ಡರ್ಸೆ ಗ್ರಾ.ಪಂ. ಮಾಜಿ ಅಧ್ಯಕ್ಷ ಪ್ರಕಾಶ್ ಆಚಾರ್ಯ, ಮಾಜಿ ಸದಸ್ಯ ರಾಜು ಶ್ರೀಯಾನ್, ಗ್ರಾಮ ಒನ್ ಕೇಂದ್ರದ ಮುಖ್ಯಸ್ಥೆ ಸರೋಜಾ ಜಿ. ಪೂಜಾರಿ, ಜಗದೀಶ್ ಪೂಜಾರಿ, ಸ್ಥಳೀಯರಾದ ಸುದೀಪ್ ವಡ್ಡರ್ಸೆ ಮುಂತಾದವರು ಉಪಸ್ಥಿತರಿದ್ದರು.