ಬೆಂಗಳೂರು: ಕೋವಿಡ್-19 ಸ್ಥಿತಿಗತಿ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ತಜ್ಞರ ಉಪಸ್ಥಿತಿಯಲ್ಲಿ ಇಂದು ಮಹತ್ವದ ಸಭೆ ನಡೆಯಿತು.
ಗುಣಮುಖರಾಗುತ್ತಿರುವವರ ಪ್ರಮಾಣ ಹೆಚ್ಚಾಗುತ್ತಿದ್ದು ಸಕ್ರಿಯ ಪ್ರಕರಣಗಳ ಸಂಖ್ಯೆಯೂ ಕಡಿಮೆಯಾಗುತ್ತಿದೆ. ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಶೇಕಡ 2ಕ್ಕೆ ಇಳಿದಿದೆ. ಈ ಹಿನ್ನಲೆಯಲ್ಲಿ ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.
* ಜನವರಿ 31 ರಿಂದ ರಾತ್ರಿ ಕರ್ಫ್ಯೂ ರದ್ದು.
* ಬೆಂಗಳೂರು ನಗರದಲ್ಲಿ ಜನವರಿ 31ರಿಂದ ಶಾಲೆ, ಕಾಲೇಜುಗಳನ್ನು ತೆರೆಯಲು ತೀರ್ಮಾನ.
* ಪಬ್, ಕ್ಲಬ್, ರೆಸ್ಟೋರೆಂಟ್, ಬಾರ್, ಹೋಟೇಲ್ ಗಳಲ್ಲಿ ಶೇ. 50 ಆಸನ ಸಮರ್ಥ್ಯದಡಿ ಕಾರ್ಯನಿರ್ವಹಿಸುವ ನಿರ್ಬಂಧವನ್ನು ಹಿಂಪಡೆಯಲಾಗಿದೆ.
* ಸಿನೆಮಾ, ಮಲ್ಟಿಪ್ಲೆಕ್ಸ್, ಥಿಯೇಟರ್, ರಂಗಮಂದಿರ, ಆಡಿಟೋರಿಯಂ ಮತ್ತು ಇತರ ಸ್ಥಳಗಳಲ್ಲಿ ಶೇ. 50ರ ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲಿದೆ.
* ವಿವಾಹ ಸಮಾರಂಭಗಳಿಗೆ ತೆರೆದ ಸ್ಥಳದಲ್ಲಿ 300 ಜನರಿಗೆ ಹಾಗೂ ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಮಾತ್ರ ಅವಕಾಶ.
* ಸರ್ಕಾರಿ ಸಚಿವಾಲಯಗಳಲ್ಲಿ ಶೇ. 100 ರಷ್ಟು ಸಿಬ್ಬಂದಿ ಕಾರ್ಯನಿರ್ವಹಿಸುವುದು.
* ಧಾರ್ಮಿಕ ಸ್ಥಳಗಳಲ್ಲಿ ದರ್ಶನ ಹಾಗೂ ಸೇವೆಗೆ ಅವಕಾಶ. ಶೇ. 50ರ ಸಾಮರ್ಥ್ಯದಲ್ಲಿ ಪ್ರವೇಶ.
* ಎಲ್ಲ ಸಾಮಾಜಿಕ, ಧಾರ್ಮಿಕ, ರಾಜಕೀಯ ರೇಲಿ, ಧರಣಿ, ಸಮಾವೇಶ, ಪ್ರತಿಭಟನೆಗಳಿಗೆ ಅವಕಾಶವಿಲ್ಲ.
* ಸ್ವಿಮ್ಮಿಂಗ್ ಪೂಲ್, ಜಿಮ್ ಗಳು ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.
* ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮತ್ತು ಕ್ರೀಡಾಂಗಣಗಳಲ್ಲಿ ಶೇ. 50 ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸುವುದು.
* ಕೇರಳ, ಮಹಾರಾಷ್ಟ್ರ, ಗೋವಾ ಗಡಿಗಳಲ್ಲಿ ತೀವ್ರ ನಿಗಾ ವಹಿಸುವುದು.
* ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆಗೆ ಶೇ. 25ರಷ್ಟು ಹಾಸಿಗೆಗಳನ್ನು ನಿಗದಿಪಡಿಸಲು ನಿರ್ಧಾರ.