ಉಡುಪಿ: ಉಡುಪಿ ಜಿಲ್ಲೆಯಲ್ಲಿ 579 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-320, ಕುಂದಾಪುರ-161, ಕಾರ್ಕಳ-93, ಹೊರ ಜಿಲ್ಲೆ- 5 ಸೋಂಕಿಗೆ ಒಳಗಾಗಿದ್ದಾರೆ. 1036 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 5642 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 17.67 ರಷ್ಟಿದೆ.
ಸೋಂಕಿನಿಂದ 5 ಮಂದಿ ಸಾವನ್ನಪ್ಪಿದ್ದಾರೆ. ಜನವರಿ 28 ರಂದು 3139 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.