ಉಡುಪಿ: ಇತ್ತೀಚಿನ ದಿನಗಳಲ್ಲಿ ಯುವಜನರು ಸ್ವ ಉದ್ಯೋಗದತ್ತ ಹೆಚ್ಚಿನ ಒಲವನ್ನು ತೋರುತ್ತಿದ್ದು ಅವಶ್ಯಕ ತರಬೇತಿಗಳು ದೊರೆತಲ್ಲಿ ಖಂಡಿತವಾಗಿಯೂ ಅವರು ಯಶಸ್ಸನ್ನು ಗಳಿಸಲು ಸಾಧ್ಯ. ಈ ನಿಟ್ಟಿನಲ್ಲಿ ಮಣಿಪಾಲದ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯು ಆಯೋಜಿಸಿರುವ 30 ದಿನಗಳ ವಿದ್ಯುತ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್‌ಸೆಟ್ ದುರಸ್ತಿ ತರಬೇತಿಯು ಯುವಕರಿಗೆ ಒಂದು ಉತ್ತಮ ಅವಕಾಶವಾಗಿದೆ ಎಂದು ಉಡುಪಿ ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ಉಪ ನಿರೀಕ್ಷಕರಾದ ಪ್ರಕಾಶ್ ಅಭಿಪ್ರಾಯಪಟ್ಟರು.
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ವತಿಯಿಂದ 30 ದಿನಗಳ ಕಾಲ ನಡೆಯಲಿರುವ ವಿದ್ಯುತ್ ಮೋಟಾರ್ ರಿವೈಂಡಿಂಗ್ ಮತ್ತು ಪಂಪ್‌ಸೆಟ್ ದುರಸ್ತಿ ತರಬೇತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸಂಸ್ಥೆಯ ನಿರ್ದೇಶಕರಾದ ಸವಿತಾ ಎಸ್ ನಾಯಕ್ ಸ್ವಾಗತಿಸಿ, ತರಬೇತಿಯ ಅವಧಿಯಲ್ಲಿ ತಿಳಿಸಲಾಗುವ ವಿಷಯಗಳ ಕುರಿತು ಸಂಕ್ಷಿಪ್ತ ಮಾಹಿತಿಯನ್ನು ನೀಡಿದರು.
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯ ಉಪನ್ಯಾಸಕಿ ಶ್ರೇಯಾ ಕಾರ್ಯಕ್ರಮವನ್ನು ನಿರೂಪಿಸಿದರು. ಸಂಸ್ಥೆಯ ಕಛೇರಿ ಸಹಾಯಕರಾದ ಸಂತೋಷ್ ವಂದಿಸಿದರು.