ಉಡುಪಿ: ಉಡುಪಿ ಜಿಲ್ಲೆಯಲ್ಲಿ 175 ಮಂದಿಗೆ ಸೋಂಕು ದೃಢಪಟ್ಟಿದೆ. ಉಡುಪಿ ತಾಲೂಕು-105, ಕುಂದಾಪುರ-42, ಕಾರ್ಕಳ-26, ಹೊರ ಜಿಲ್ಲೆ- 2 ಸೋಂಕಿಗೆ ಒಳಗಾಗಿದ್ದಾರೆ.
378 ಮಂದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 1963 ಸಕ್ರಿಯ ಪ್ರಕರಣಗಳಿವೆ. ಉಡುಪಿ ತಾಲೂಕಿನ ಪಾಸಿಟಿವಿಟಿ ಪ್ರಮಾಣ ಶೇಕಡ 5.9 ರಷ್ಟಿದೆ.
ಸೋಂಕಿನಿಂದ ಇಬ್ಬರು ಸಾವನ್ನಪ್ಪಿದ್ದಾರೆ. ಫೆಬ್ರವರಿ 5 ರಂದು 2327 ಮಾದರಿಗಳನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದೆ.
ವಿಶೇಷ ಸೂಚನೆ: ಮನೆಯಿಂದ ಹೊರಗಡೆ ಹೋಗುವಾಗ, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ. ವ್ಯಕ್ತಿಗತ ಅಂತರವನ್ನು ಕಾಯ್ದುಕೊಳ್ಳಿ, ಕೈಗಳ ಸ್ವಚ್ಛತೆಯನ್ನು ಕಾಪಾಡಿಕೊಳ್ಳಿ, ಲಸಿಕೆ ಪಡೆಯದವರನ್ನು ಲಸಿಕೆ ಪಡೆಯುವಂತೆ ಮನವೊಲಿಸಿ, ಸರ್ಕಾರದ ಕೊರೊನಾ ಮಾರ್ಗಸೂಚಿಗಳನ್ನು ಪಾಲಿಸಿ.