Tuesday, November 26, 2024
Tuesday, November 26, 2024

ಉಡುಪಿ: ಫೆ.16ರಿಂದ 23ರವರೆಗೆ ಕಾಲೇಜು ಸುತ್ತಮುತ್ತ 200ಮೀ ಪ್ರದೇಶದಲ್ಲಿ ಸೆಕ್ಷನ್ 144

ಉಡುಪಿ: ಫೆ.16ರಿಂದ 23ರವರೆಗೆ ಕಾಲೇಜು ಸುತ್ತಮುತ್ತ 200ಮೀ ಪ್ರದೇಶದಲ್ಲಿ ಸೆಕ್ಷನ್ 144

Date:

ಉಡುಪಿ: ಜಿಲ್ಲೆಯಲ್ಲಿ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗೃತಾ ಕ್ರಮವಾಗಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪದವಿಪೂರ್ವ, ಪಾಲಿಟೆಕ್ನಿಕ್‌ ಮತ್ತು ಪದವಿ ಕಾಲೇಜುಗಳ ಸುತ್ತಮುತ್ತಲು 200ಮೀ ಪ್ರದೇಶದಲ್ಲಿ ದಿನಾಂಕ: 16-02-2022 ರ ಬೆಳಿಗ್ಗೆ 6.00 ರಿಂದ ದಿನಾಂಕ 23-02-2022ರ ಸಂಜೆ 6.00ಗಂಟೆಯವರೆಗೆ ನಿಷೇದಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಆದೇಶ ಹೊರಡಿಸಿದ್ದಾರೆ.

ಈ ನಿಷೇದಾಜ್ಞೆ ಜಾರಿ ಇರುವ ಅವಧಿಯಲ್ಲಿ: 
* ಕಾನೂನು ಭಂಗ ಉಂಟು ಮಾಡುವ ಉದ್ದೇಶದಿಂದ ಐದು ಮತ್ತು ಐದಕ್ಕಿಂತ ಹೆಚ್ಚು ಜನರು ಗುಂಪಾಗಿ ಸೇರುವುದನ್ನು ನಿರ್ಭಂಧಿಸಿದೆ.

* ಯಾವುದೇ ವ್ಯಕ್ತಿಯ ಜಾತಿ/ಧರ್ಮ/ಕೋಮು/ಪಂಥಗಳಿಗೆ ಅಥವಾ ಸಾರ್ವಜನಿಕ ನೈಜಿಕತೆಗೆ ಬಾಧಕ ಉಂಟು ಮಾಡಬಹುದಾದಂತಹ ಚಟುವಟಿಕೆಗಳನ್ನು ನಿಷೇಧಿಸಿದೆ.

* ಸರ್ಕಾರಿ ಸಂಸ್ಥೆಗಳು/ ಸಂಘಟನೆಗಳು ಹಾಗೂ ಕಾರ್ಯನಿರತ ಅಧಿಕಾರಿ/ಸಿಬ್ಬಂಧಿಗಳ ವಿರುದ್ಧ ನಿಂಧಿಸುವಂತಹ/ಅವಹೇಳನಕಾರಿಯಂತಹ ಯಾವುದೇ ಘೋಷಣೆಗಳು/ಭಾಷಣಗಳು ಪ್ರಕಟಣೆಗಳು/ ಅವಾಚ್ಯ ಶಬ್ಧಗಳ ಬಳಕೆ/ಪ್ರಚೋದನಾಕಾರಿ ಭಾಷಣಗಾಯನ ಇತ್ಯಾದಿ ಚಟುವಟಿಕೆಗಳನ್ನು ನಿಷೇಧಿಸಿದೆ.

* ಶಸ್ತ್ರಗಳು, ದೊಣ್ಣೆಗಳು, ಕತ್ತಿಗಳು, ಈಟಿಗಳು, ಗದೆಗಳು. ಬಂದೂಕುಗಳು, ಚಾಕುಗಳು, ಕೋಲುಗಳ ಅಥವಾ ಲಾಠಿಗಳನ್ನು ಅಥವಾ ದೈಹಿಕ ಹಿಂಸೆಯನ್ನುಂಟು ಮಾಡುವ ಇತರ ಯಾವುದೇ ವಸ್ತುಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

* ಪಟಾಕಿಗಳನ್ನು ಸಿಡಿಸುವುದು, ಯಾವುದೇ ಕ್ಷಾರಕ ಪದಾರ್ಥ ಅಥವಾ ಸ್ಪೋಟಕಗಳನ್ನು ಒಯ್ಯುವುದನ್ನು ನಿಷೇಧಿಸಿದೆ.

* ಯಾವುದೇ ರೀತಿಯ ಪ್ರತಿಭಟನೆ, ವಿಜಯೋತ್ಸವ, ಸಾರ್ವಜನಿಕ ಮೆರವಣಿಗೆ/ ರೇಲಿ, ಸಾರ್ವಜನಿಕ/ರಾಜಕೀಯ ಸಭೆ ಸಮಾರಂಭಗಳನ್ನು ನಡೆಸುವುದನ್ನು ನಿಷೇಧಿಸಿದೆ.

* ಕಲ್ಲುಗಳನ್ನು ಅಥವಾ ಇತರ ಕ್ಷಿಪಣಿಗಳನ್ನು ಎಸೆಯುವ ಅಥವಾ ವೇಗದಿಂದ ಒಗೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆಯನ್ನು ಶೇಖರಿಸುವುದನ್ನು ಮತ್ತು ತಯಾರಿಸುವುನ್ನು ನಿಷೇಧಿಸಿದೆ.

* ವ್ಯಕ್ತಿಗಳ ಅಥವಾ ಅವರ ಶವಗಳ ಅಥವಾ ಆಕೃತಿಗಳ ಅಥವಾ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು ನಿಷೇಧಿಸಿದೆ.

* ಸಾರ್ವಜನಿಕ ಸ್ಥಳದಲ್ಲಿ ಎಲ್.ಇ.ಡಿ ಬಳಸಿ ಪ್ರದರ್ಶನ ನಡೆಸುವುದನ್ನು ನಿಷೇಧಿಸಿದೆ.

* ಸಾರ್ವಜನಿಕ ಸ್ಥಳದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ಮಾಡುವುದನ್ನು ನಿಷೇಧಿಸಿದೆ.

* ಸಭ್ಯತೆ ಅಥವಾ ನೀತಿಯನ್ನು ಅತಿಕ್ರಮಿಸಬಹುದಾದ ಅಥವಾ ಸಾರ್ವಜನಿಕ ಸುವ್ಯವಸ್ಥೆಗೆ ಭಾಧೆಯನ್ನುಂಟು ಮಾಡಬಹುದಾದ ಅಥವಾ ರಾಜ್ಯದ ಭದ್ರತೆಯನ್ನು ಕುಗ್ಗಿಸಬಹುದಾದದ ಅಪರಾಧವನ್ನು ಮಾಡಲು ಪ್ರಚೋದಿಸಬಹುದಾದದ ಬಹಿರಂಗ ಘೋಷಣೆಗಳನ್ನು ಮಾಡುವುದು ಹಾಡುಗಳನ್ನು ಹಾಡುವುದು, ಸಂಗೀತವನ್ನು ನುಡಿಸುವುದು, ಆವೇಶಭರಿತ ಭಾಷಣ ಮಾಡುವುದು, ಇಂಗಿತ ಸೂಚನೆಗಳ ಅಥವಾ ಅಂಕ ನಿರೂಪಣೆಗಳನ್ನು ಪ್ರಯೊಗ ಮಾಡುವುದು, ಮತ್ತು ಚಿತ್ರಗಳನ್ನು ,ಸಂಕೇಗಳನ್ನು ಭಿತ್ತಿ ಪತ್ರಗಳನ್ನು ಆಥವಾ ಇತರೆ ಯಾವುದೇ ವಸ್ತು ಅಥವಾ ಪದಾರ್ಥಗಳನ್ನು ತಯಾರಿಸುವುದು, ಪ್ರದರ್ಶಿಸುವುದು ಅಥವಾ ಪ್ರಸಾರ ಮಾಡುವುದನ್ನು ನಿಷೇಧಿಸಿದೆ.

ಈ ಆದೇಶವು ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪದವಿಪೂರ್ವ, ಪಾಲಿಟೆಕ್ನಿಕ್‌ಮತ್ತು ಪದವಿ ಕಾಲೇಜುಗಳ ಸುತ್ತ ಮುತ್ತಲು 200ಮೀ ಪ್ರದೇಶವನ್ನು ದಿನಾಂಕ:16.02.2022 ರ ಬೆಳಿಗ್ಗೆ 6.00 ರಿಂದ ದಿನಾಂಕ 23.02.2022ರ ಸಂಜೆ 6.00ಗಂಟೆಯವರೆಗೆ ಜ್ಯಾರಿಯಲ್ಲಿರುತ್ತದೆ.

ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಿಗೆ ಅನ್ವಯಿಸುವುದಿಲ್ಲ, ಆಯಾ ಕಾಲೇಜು ಉಪನ್ಯಾಸಕರು/ಶಿಕ್ಷಕರು/ಸಿಬ್ಬಂಧಿ/ಪೋಷಕರು/ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ/ ಕಾಲೇಜು ಬಸ್‌ಗಳಿಗೆ ಅನ್ವಯಿಸುವುದಿಲ್ಲ ಮತ್ತು ಆರಕ್ಷಕ ಸಿಬ್ಬಂದಿಗಳು ಕಾರ್ಯನಿರ್ವಹಣೆ ವೇಳೆ ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಹಾಗೂ ಬ್ಯಾಂಕ್/ ಎ.ಟಿ.ಎಂ. ಭದ್ರತಾ ಸಿಬ್ಬಂದಿಗಳು ಮತ್ತು ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ ಸಿಬ್ಬಂದಿಗಳು ಮತ್ತು ಕೋವಿಡ್ -19 ನಿಯಂತ್ರಣ ಕರ್ತವ್ಯದಲ್ಲಿರುವ ಸಿಬ್ಬಂದಿಗಳ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯಿಸುವುದಿಲ್ಲ.

ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೋವಿಡ್-19 ಗೆ ಸಂಬಂಧಿಸಿದಂತೆ ಜಾರಿಗೊಳಿಸಿದ ಮಾರ್ಗಸೂಚಿಗಳನ್ನು ಪಾಲನೆ ಮಾಡುವಂತೆ ಸೂಚಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಂಚವರ್ಣ: 231ನೇ ಪರಿಸರಸ್ನೇಹಿ ಅಭಿಯಾನ

ಕೋಟ. ನ.25: ಪಂಚವರ್ಣ ಸಂಸ್ಥೆ ಪರಿಸರ ಜಾಗೃತಿ ಸ್ವಚ್ಛತಾ ಆಂದೋಲನ ಅವಿಭಜಿತ...

ಸಿಒಡಿಪಿ: ವಿಚಾರ ಸಂಕಿರಣ

ಮಂಗಳೂರು, ನ.25: ಮಾನವ ಕಳ್ಳಸಾಗಣೆ ಮತ್ತು ಸೈಬರ್ ಅಪರಾಧ ಕುರಿತ ವಿಚಾರ...

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...
error: Content is protected !!