ಉಡುಪಿ: ಕೇಂದ್ರ ಶಿಕ್ಷಣ ಮಂತ್ರಾಲಯ, ರಾಷ್ಟ್ರೀಯ ಕೌಶಲ್ಯಾಭಿವೃದ್ಧಿ ನಿಗಮ, (ಎನ್.ಎಸ್.ಡಿ.ಸಿ) ಹಾಗೂ ಎನ್.ಎಸ್.ಕ್ಯೂ.ಎಫ್ ಸಹಯೋಗದಲ್ಲಿ ಶಾಲೆಯಿಂದ ಹೊರಗುಳಿದಿರುವ 20 ಕಿ.ಮೀ ವ್ಯಾಪ್ತಿಯೊಳಗಿನ ಅರೆಕಾಲಿಕ ನೌಕರರು ಮತ್ತು ಆಸಕ್ತ 15 ರಿಂದ 45 ವಯೋಮಿತಿ ಒಳಗಿನವರಿಗೆ ಸಂಜೆಯ ಅವಧಿಯಲ್ಲಿ 2 ಗಂಟೆಗಳ ಕಾಲ ಕೌಶಲ್ಯ ತರಬೇತಿ ನೀಡಲು ಕಾರ್ಕಳ ತಾಲೂಕಿನ ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜು ಹಾಗೂ ಉಡುಪಿ ತಾಲೂಕಿನ ಬ್ರಹ್ಮಾವರ ಸರಕಾರಿ ಪದವಿ ಪೂರ್ವ ಕಾಲೇಜು ಇಲ್ಲಿ ಸ್ಕಿಲ್ ಹಬ್ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.
ಈ ಮೇಲ್ಕಾಣಿಸಿದ ಕೇಂದ್ರಗಳಲ್ಲಿ ITes (Information Technology Enabled Services) & Automobile ಕ್ಷೇತ್ರಗಳಲ್ಲಿ ತರಬೇತಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ರಜತಾದ್ರಿ, ಮಣಿಪಾಲ, ಉಡುಪಿ ಮೊ.ನಂ: 9448409355, 9449943882, ಸಾರ್ವಜನಿಕ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ, ಮೊ.ನಂ:9449449602, 9591348695 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.