ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಆರ್ಥಿಕ ಪ್ರಕೋಷ್ಠ ಮತ್ತು ಜಿಲ್ಲಾ ಮಾಧ್ಯಮ ಪ್ರಕೋಷ್ಠ ಇದರ ಸಂಯುಕ್ತ ಆಶ್ರಯದಲ್ಲಿ ಉಡುಪಿಯ ಹೋಟೆಲ್ ಕಿದಿಯೂರ್ ಮಾಧವಕೃಷ್ಣ ಸಭಾಂಗಣದಲ್ಲಿ ನಡೆದ ‘ಕೇಂದ್ರ ಬಜೆಟ್ ಮತ್ತು ಭಾರತದ ಆರ್ಥಿಕತೆ’ ವಿಚಾರಗೋಷ್ಠಿಯನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಆರ್ಥಿಕ ತಜ್ಞ ಹಾಗೂ ಬಿಜೆಪಿ ರಾಜ್ಯ ಆರ್ಥಿಕ ಪ್ರಕೋಷ್ಠದ ಸಂಚಾಲಕ ಡಾ. ಸಮೀರ್ ಕಗಲ್ಕರ್ ವಿಚಾರಗೋಷ್ಠಿಯನ್ನು ನಡೆಸಿಕೊಟ್ಟರು.
ಡಾ. ಸಮೀರ್ ಕಗಲ್ಕರ್ ರವರನ್ನು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮನೋಹರ್ ಎಸ್. ಕಲ್ಮಾಡಿ ಶಾಲು ಹೊದೆಸಿ ಸ್ಮರಣಿಕೆ ನೀಡಿ ಗೌರವಿಸಿದರು.
ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠ ಸಮಿತಿ ಸದಸ್ಯ ಚಿದಾನಂದ ಉಚ್ಚಿಲ್, ಬಿಜೆಪಿ ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ ಕಟಪಾಡಿ, ಸಮಾಜದ ವಿವಿಧ ರಂಗಗಳ ಪ್ರಮುಖರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಆರ್ಥಿಕ ಪ್ರಕೋಷ್ಠದ ಸಂಚಾಲಕ ದಿವಾಕರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಕೋಷ್ಠದ ಸಂಚಾಲಕ ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಸ್ವಾಗತಿಸಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ ವಂದಿಸಿದರು. ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಕಾರ್ಯಕ್ರಮ ನಿರೂಪಿಸಿದರು.