ಕೋಟ: ಸಂಘಟನೆಗಳು ಸಮಾಜದ ಶ್ರೇಯಸ್ಸಿಗಾಗಿ ಸಮಾಜಮುಖಿ ಚಿಂತನೆಗಳ ಮೂಲಕ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡು ನೊಂದವರ, ಅಶಕ್ತರ ಬಾಳಿಗೆ ಬೆಳಕಾಗಿ ಹೊಸ ಮುನ್ನುಡಿ ಬರೆಯುತ್ತಿದೆ. ಈ ನಿಟ್ಟಿನಲ್ಲಿ ಯುವವಾಹಿನಿ(ರಿ) ಯಡ್ತಾಡಿ ಘಟಕ ಹಲವಾರು ಸಮಾಜ ಸೇವೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಂಘಟನೆಯ ಸ್ಪಾಪನೆಯ ಉದ್ದೇಶದಂತೆ ಹೆಜ್ಜೆ ಹಾಕುತ್ತಿರುವುದು ಶ್ಲಾಘನೀಯ ಎಂದು ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಅವರು ಯಡ್ತಾಡಿ ಶ್ರೀಕೃಷ್ಣ ನಿಲಯದ ವಠಾರದಲ್ಲಿ ಯುವವಾಹಿನಿ (ರಿ) ಯಡ್ತಾಡಿ ಘಟಕದ ಪದಸ್ವೀಕಾರ ಸಮಾರಂಭದಲ್ಲಿ ಮಾತನಾಡುತ್ತಿದ್ದರು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೂರ್ತೆದಾರರ ಸೇವಾ ಸಹಕಾರಿ
ಸಂಘ(ನಿ)ಕೋಟದ ಅಧ್ಯಕ್ಷರಾದ ಕೊರಗ ಪೂಜಾರಿ ಸಂದಿಗ್ದ ಪರಿಸ್ಥಿತಿಯಲ್ಲಿ ಸಂಘಟನೆಗಳು ಸಮಾಜದ ಒಳಿತಿಗಾಗಿ ಮುಂದೆ ಬಂದು ಕಾರ್ಯವೆಸಗಬೇಕು.
ಸಾಧಕರನ್ನು ಗುರುತಿಸಿ ಸನ್ಮಾನ ಕಾರ್ಯಕ್ರಮ ಆಯೋಜಿಸಿರುವುದು ಶ್ಲಾಘನೀಯ ಇದರಿಂದ ಹಲವರಿಗೆ ಪ್ರೇರಣೆಯಾಗಿ ಸಾಧನೆ ಮಾಡಲು ಸಾಧ್ಯವಾಗಬಹುದೆಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಶಿಕ್ಷಕ ನರೇಂದ್ರ ಕುಮಾರ್ ಕೋಟ, ಪೋಲಿಸ್ ಇಲಾಖೆಯಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ಶಂಕರ್ ಪೂಜಾರಿ ಕಾಡಿನತಾರು, ಅಗ್ನಿಶಾಮಕದಳದಲ್ಲಿ ಮುಖ್ಯಮಂತ್ರಿ ಚಿನ್ನದ ಪದಕ ಪುರಸ್ಕೃತ ನಾಗರಾಜ ಪೂಜಾರಿ, ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರಸಿದ್ಧ ಯಕ್ಷಗಾನ ಕಲಾವಿದ ಸೀತಾರಾಮ್ ಕುಮಾರ್ ಕಟೀಲ್ ಅವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿಯ ಅಧ್ಯಕ್ಷರಾದ ರಾಜು ಪೂಜಾರಿ ವಹಿಸಿದ್ದರು. ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಅಧ್ಯಕ್ಷರಾದ ಉದಯ ಅಮೀನ್ ಮಟ್ಟು, ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ಆರೋಗ್ಯಾಧಿಕಾರಿ ಡಾ. ಪ್ರದೀಪ, ಸ್ವಾಗತ್ ವಿವಿದೋದ್ದೇಶ ಸಹಕಾರಿ ಸಂಘ (ನಿ) ಬಾರಕೂರು ಅಧ್ಯಕ್ಷರಾದ ಸುಬ್ರಹ್ಮಣ್ಯ ಪೂಜಾರಿ, ಯುವವಾಹಿನಿ ಕೇಂದ್ರ ಸಮಿತಿಯ ಪದಾಧಿಕಾರಿಗಳಾದ ಸತೀಶ್ ಕಿಲ್ಪಾಡಿ, ದೀಪಕ್ ಕುಮಾರ್ ಎರ್ಮಾಳು, ಯುವವಾಹಿನಿ ಕಾರ್ಯದರ್ಶಿ ಅಜಿತ್ ಕುಮಾರ್ ಪೂಜಾರಿ, ನಿಯೋಜಿತ ಅಧ್ಯಕ್ಷ ಸೋಮಪ್ಪ ಪೂಜಾರಿ, ನಿಯೋಜಿತ ಕಾರ್ಯದರ್ಶಿ ಸುಶಾಂತ್ ಪೂಜಾರಿ ಉಪಸ್ಥಿತರಿದ್ದರು.